ಶನಿವಾರವೇ ಸುಪ್ರೀಂಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸಿಎಂ ತೀರ್ಮಾನ; ತಜ್ಞರ ಸಲಹೆಗಳೇನು?

Public TV
3 Min Read

ಬೆಂಗಳೂರು: ಕಾವೇರಿ ಬಿಕ್ಕಟ್ಟಿಗೆ (Cauvery Dispute) ಪರಿಹಾರ ಕಂಡುಕೊಳ್ಳುವ ಸಲುವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಶುಕ್ರವಾರ) ಕಾನೂನು ತಜ್ಞರ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ಅಂತರರಾಜ್ಯ ಜಲವಿವಾದದ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚನೆ ಮಾಡುವಂತೆ ನಿವೃತ್ತ ನ್ಯಾಯಮೂರ್ತಿಗಳು ಸರ್ಕಾರಕ್ಕೆ ಅಭಿಪ್ರಾಯ ನೀಡಿದ್ದಾರೆ. ಅಲ್ಲದೇ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪ್ರಶ್ನಿಸಿ CWMA ಹಾಗೂ ಸುಪ್ರೀಂ ಕೋರ್ಟ್‌ಗೆ (Supreme Court) ಮರುಪರಿಶೀಲನೆ ಅರ್ಜಿ ಹಾಕಲು ಸಲಹೆ ನೀಡಿದ್ದಾರೆ. ಹೀಗಾಗಿ ಶನಿವಾರ (ಸೆ.30) ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸಿಎಂ ತೀರ್ಮಾನಿಸಿದ್ದಾರೆ.

ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ನಡೆದ ಸಭೆಯ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಅಭಿನಂದಿಸುತ್ತೇನೆ ಎಂದು ಹೇಳಿದರು.

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಮಾಜಿ ಅಡ್ವೊಕೇಟ್ ಜನರಲ್ ಗಳು ಸಭೆಯಲ್ಲಿ ಭಾಗವಹಿಸಿದ್ದರು. ಅವರ ಅನುಭವದ ಆಧಾರದ ಮೇಲೆ ಕೆಲವು ಅಭಿಪ್ರಾಯ, ಸಲಹೆಗಳನ್ನು ನೀಡಿದ್ದಾರೆ. ಅವರ ಸಲಹೆಗಳನ್ನು ಪರಿಗಣಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಪರಿಣಿತರ ಸಲಹಾ ಸಮಿತಿ ರಚನೆ:
ಮುಖ್ಯವಾಗಿ ರಾಜ್ಯದ ನೀರಾವರಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪರಿಣಿತರ ಸಲಹಾ ಸಮಿತಿಯನ್ನು ರಚಿಸಿ, ದತ್ತಾಂಶ ಸಂಗ್ರಹ, ಸಲಹೆ ನೀಡುವ ಕಾರ್ಯವನ್ನು ಮಾಡಬೇಕು. ಅಂತರರಾಜ್ಯ ಜಲವಿವಾದಗಳ ಬಗ್ಗೆ ಸರ್ಕಾರಕ್ಕೆ ಸಲಹೆ-ಸೂಚನೆ, ಕಾನೂನು ತಂಡಕ್ಕೆ ಮಾಹಿತಿ ನೀಡಲು ಕೂಡ ಸಮಿತಿ ಅಗತ್ಯ ಎನ್ನುವ ಸಲಹೆ ಬಂದಿದೆ. ಇದರಂತೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದರು.

ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು (TamilNadu Cauvery Water) ಬಿಡುವ ಬಗ್ಗೆ, ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ. ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ಹಳೇ ಬಾಕಿ ಸರಿದೂಗಿಸಬೇಕು ಎಂದು 3000 ಕ್ಯೂಸೆಕ್ ನೀಡಲು ಸೂಚಿಸಿದ್ದಾರೆ. ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂ ಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆಯೂ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಮೇಕೆದಾಟು ಯೋಜನೆಗೆ ತೀವ್ರ ಒತ್ತಾಯ:
ಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಪ್ರಸ್ತಾಪ ಮಾಡಬೇಕು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಇಲ್ಲ. ಮೇಕೆದಾಟು ಬ್ಯಾಲೆನ್ಸಿಂಗ್ ಜಲಾಶಯವಾಗಿ 67 ಟಿಎಂಸಿ ನೀರು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಲಿದೆ. ವಿದ್ಯುತ್ ಹಾಗೂ ಕುಡಿಯುವ ನೀರಿಗೆ ಅದನ್ನು ಬಳಸಬಹುದು. ಸಂಕಷ್ಟ ಬಂದಾಗ ತಮಿಳುನಾಡಿಗೆ ನೀರು ಬಿಡಬಹುದು ಎಂಬುದರ ಬಗ್ಗೆಯೂ ಸಲಹೆ ನೀಡಿದ್ದಾರೆ ಎಂದು ಸಿಎಂ ವಿವರಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಕೃಷಿ ಸಚಿವ ಚೆಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್, ಕಾನೂನು ಸಲಹೆಗಾರರಾದ ಪೊನ್ನಣ್ಣ ಉಪಸ್ಥಿತರಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್