ಮಂಡ್ಯದಲ್ಲಿ ಕಾವೇರಿ, ದಾವಣಗೆರೆಯಲ್ಲಿ ಭದ್ರಾ ನೀರಿಗಾಗಿ ಬೀದಿಗಿಳಿದ ರೈತರು

Public TV
2 Min Read

ದಾವಣಗೆರೆ: ಅತ್ತ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಮಂಡ್ಯದಲ್ಲಿ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಭದ್ರಾ (Bhadra) ನೀರು ಬಿಡುಗಡೆಗಾಗಿ ದಾವಣಗೆರೆ (Davanagere) ರೈತರು (Farmers) ಬೀದಿಗಿಳಿದಿದ್ದಾರೆ. ಭದ್ರಾ ನೀರು ಹರಿಸದಿದ್ದರೆ ಸೋಮವಾರ ದಾವಣಗೆರೆ ಬಂದ್‌ಗೆ ಕರೆ ನೀಡಿದ್ದಾರೆ.

ಭದ್ರಾ ಕಾಡಾ ಸಮಿತಿ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದು, ಭಾರತೀಯ ರೈತ ಒಕ್ಕೂಟದಿಂದ ದಾವಣಗೆರೆ ಬಂದ್‌ಗೆ ಕರೆ ನೀಡಲಾಗಿದೆ. ಭಾನುವಾರ ಸಂಜೆ 6 ಗಂಟೆ ಒಳಗೆ ಕಾಡಾ ಲಿಖಿತ ಆದೇಶ ನೀಡದಿದ್ದರೆ ಸೋಮವಾರ ಜಿಲ್ಲಾದ್ಯಂತ ಬಂದ್‌ನ ಎಚ್ಚರಿಕೆಯನ್ನು ನೀಡಲಾಗಿದೆ.

ಭದ್ರಾ ನೀರನ್ನೇ ನಂಬಿಕೊಂಡು ಸಾವಿರಾರು ರೈತರು ಈಗ ಅತಂತ್ರ ಸ್ಥಿತಿಯಲ್ಲಿದ್ದಾರೆ. ಭದ್ರಾ ಕಾಡಾ ಸಮಿತಿ ಆನ್ ಆ್ಯಂಡ್ ಆಫ್ ಪದ್ಧತಿಯಲ್ಲಿ ನೀರು ಬಿಡುತ್ತಿದೆ. ಆನ್ ಆ್ಯಂಡ್ ಆಫ್ ಪದ್ಧತಿಯಲ್ಲಿ ನೀರು ಹರಿಸಿದರೆ ಟೇಲ್ ಎಂಡ್ ರೈತರಿಗೆ ನೀರು ಸಿಗುವುದಿಲ್ಲ. ಈ ನೀರನ್ನೇ ನಂಬಿ ಸಾವಿರಾರು ಎಕರೆಯಲ್ಲಿ ಭತ್ತ ನಾಟಿ ಮಾಡಲಾಗಿದೆ. ಭದ್ರಾ ನಾಲೆ ನೀರು ನಿಲ್ಲಿಸಿದ್ದಕ್ಕೆ ಭತ್ತ ಒಣಗುತ್ತಿದೆ. ಭದ್ರಾ ನೀರಿಗಾಗಿ ಶಿವಮೊಗ್ಗ-ದಾವಣಗೆರೆ ಜಿಲ್ಲೆಯಲ್ಲಿ ರೈತರ ಜಟಾಪಟಿ ನಡೆಯುತ್ತಿದೆ. ಇದನ್ನೂ ಓದಿ: ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌

ದಾವಣಗೆರೆ ಹಿಲ್ಲೆಯ ರೈತರ ಪರಿಸ್ಥಿತಿ ನಾ ಕೊಡೆ, ನೀ ಬಿಡೆ ಎಂಬಂತಾಗಿದೆ. ತಕ್ಷಣ ಭತ್ತಕ್ಕೆ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗುತ್ತಿದೆ. ರೈತರು ಇಲ್ಲಿನ 1 ಲಕ್ಷ 40 ಸಾವಿರ ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಬೆಳೆಯುತ್ತಾರೆ. ಅದರಲ್ಲಿ 4 ಲಕ್ಷ 20 ಸಾವಿರ ಮೆಟ್ರಿಕ್ ಟನ್ ಭತ್ತ ಬೆಳೆದರೆ, 2 ಲಕ್ಷ 55 ಸಾವಿರ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನೆಯಾಗುತ್ತದೆ. ಆದರೆ ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ನಿಲ್ಲಿಸಿದ ಹಿನ್ನೆಲೆ ರೈತರು ಈಗ ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್