ನಮ್ಮ ಜಲ, ನಮ್ಮ ಹಕ್ಕು: ಸಿಎಂಗೆ ಮನವಿ ಮಾಡಿದ ಕಿಚ್ಚ ಸುದೀಪ್

Public TV
2 Min Read

ಕಾವೇರಿ (Cauvery) ನದಿ ನೀರಿನ ವಿಚಾರವಾಗಿ ಕನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ (Kiccha Sudeep) ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಸುದೀರ್ಘವಾಗಿ ಪತ್ರವೊಂದನ್ನು ಬರೆದಿರುವ ಸುದೀಪ್, ಆ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು, ಹೋರಾಟ ನೆಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲೂ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೇ, ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ. ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ನ್ಯಾಯಾಧಿಕರಣ ಮತ್ತು ಕೇಂದ್ರ ಸರಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಕೊಡಬೇಕಿದೆ.

ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬರೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಇದನ್ನೂ ಓದಿ:ಬಾಲಿವುಡ್‌ನಲ್ಲಿ 7 ಸಿನಿಮಾಗಳು ಫ್ಲಾಪ್, ಮತ್ತೆ ಸೌತ್‌ನತ್ತ ‘ಗಿಲ್ಲಿ’ ನಟಿ

ಕೇಂದ್ರ ಸರಕಾರಕ್ಕೆ ಕರ್ನಾಟಕದ ಪರಿಸ್ಥಿತಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ. ಆದರೆ, ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿ.

 

ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣ ನದಿ, ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್