ಕರ್ನಾಟಕಕ್ಕೆ ಕುಡಿಯುವ ನೀರಿನ ಚಿಂತೆ; ತಮಿಳುನಾಡಿಗೆ ಬೆಳೆ ಬಾಡುವ ಚಿಂತೆ – 15 ದಿನ 5,000 ಕ್ಯೂಸೆಕ್ ಹರಿಸಲು CWRC ಸೂಚನೆ

Public TV
2 Min Read

ನವದೆಹಲಿ: ಕಾವೇರಿ (Cauvery Water Dispute) ಅಚ್ಚುಕಟ್ಟು ಪ್ರದೇಶದಲ್ಲಿ ಬರದ ಛಾಯೇ ಆವರಿಸುತ್ತಿರುವ ಹೊತ್ತಲ್ಲಿ ತಮಿಳುನಾಡಿಗೆ (Tamil Nadu) ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ನಿರಂತರ ಆದೇಶ ನೀಡುತ್ತಿದೆ. ಇಂದು (ಮಂಗಳವಾರ) ಸಭೆ ನಡೆಸಿರುವ ಸಮಿತಿ ನಿತ್ಯ ಐದು ಸಾವಿರ ಕ್ಯೂಸೆಕ್‌ನಂತೆ ಹದಿನೈದು‌ ದಿನಗಳ ಕಾಲ ನೀರು ಹರಿಸಲು ಶಿಫಾರಸು ಮಾಡಿದೆ.

ಆಗಸ್ಟ್ 29 ರ ಆದೇಶ ಅಂತ್ಯವಾದ ಹಿನ್ನೆಲೆ ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿ ತನ್ನ ಹಳೆ ಆದೇಶವನ್ನು ಮುಂದಿನ ಹದಿನೈದು ದಿನ ಮುಂದುವರಿಸಲು ಸೂಚನೆ ನೀಡಿದೆ. ಸಮಿತಿಯ ಈ ಆದೇಶದಿಂದ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಿಸುವ ಸಾಧ್ಯತೆಗಳಿದೆ. ಇದನ್ನೂ ಓದಿ: ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆ, ಕಣ್ಣು ಕಿತ್ತುಹಾಕಬೇಕು: ಗಜೇಂದ್ರ ಸಿಂಗ್‌ ಶೇಖಾವತ್‌

ಇಂದು ಸಭೆಯಲ್ಲಿ ಭಾಗಿಯಾಗಿದ್ದ ತಮಿಳುನಾಡು ಪರ ಅಧಿಕಾರಿಗಳು ಕೃಷಿ ಬಗ್ಗೆ ತಮಿಳುನಾಡು ಪ್ರಸ್ತಾಪಿಸಿದ್ದಾರೆ. ಕಳೆದ ಆದೇಶದಲ್ಲಿ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹದಿನೈದು ದಿನ ಹರಿಸಲು ಸೂಚಿಸಿತ್ತು. ಆದರೆ ಕರ್ನಾಟಕ ನಿತ್ಯ 3,000-3,400 ಕ್ಯೂಸೆಕ್ ನೀರು ಮಾತ್ರ ಬಿಡುಗಡೆ ಮಾಡಿದೆ. ನೀರು ಬಿಡುಗಡೆ ವಿಳಂಬವಾಗುತ್ತಿರುವ ಹಿನ್ನೆಲೆ ಬೆಳೆಗಳು ನಾಶವಾಗುತ್ತಿದೆ ಎಂದು ಆರೋಪಿಸಿದ್ದು, 36.76 ಟಿಎಂಸಿ ಬಾಕಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದೆ.

ಮಳೆಯ ಪ್ರಮಾಣ ಕಡಿಮೆ ಇರುವ ಹಿನ್ನೆಲೆ ಜಲಾಶಯಗಳಲ್ಲಿ ನೀರಿನ ಕೊರತೆಯಾಗಿದೆ. ತಮಿಳುನಾಡಿಗೆ ನೀರು ಹರಿಸಿದರೆ ಕುಡಿಯುವ ನೀರಿಗೆ ತತ್ವಾರ ಎದುರಿಸಬೇಕಾಗುತ್ತದೆ. ಹೀಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ಪ್ರತಿಭಟಿಸಿದರು. ಅಂತಿಮವಾಗಿ ಸಭೆಯಲ್ಲಿ ನೀರು ಹರಿಸಲು ಸಮಿತಿ ಸೂಚನೆ ನೀಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದ ಕರ್ನಾಟಕ ಸೆ.12 ರ ಬಳಿಕ ನೀರು ಹರಿಸಲು ಕಷ್ಟವಾಗಲಿದೆ ಎಂದು‌ ಹೇಳಿತ್ತು. ಈ ಬೆನ್ನಲ್ಲೇ ಸಮಿತಿ ಈಗ ನೀರು ಹರಿಸಲು ಸೂಚನೆ ನೀಡಿದ್ದು, ಈ ಆದೇಶವನ್ನು ಕರ್ನಾಟಕ ಪಾಲಿಸಲಿದ್ಯಾ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಕೇರಳದಲ್ಲಿ ಇಬ್ಬರು ಅಸಹಜ ಸಾವು – ನಿಫಾ ಸೋಂಕು ಶಂಕೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್