ನಾಳೆ CWRC ಸಭೆ – ಈ ಬಾರಿ ತಮಿಳುನಾಡು ಬೇಡಿಕೆಯಿಟ್ಟ ನೀರಿನ ಪ್ರಮಾಣ ಎಷ್ಟು ಗೊತ್ತಾ?

Public TV
2 Min Read

ನವದೆಹಲಿ: ಕಾವೇರಿ ನದಿ ನೀರು (Cauvery River Water) ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆ ನಡೆಯಲಿದೆ‌. ಸಮಿತಿ ಅಧ್ಯಕ್ಷ ವಿನೀತ್ ಗುಪ್ತಾ ನೇತೃತ್ವದಲ್ಲಿ 88ನೇ ಸಭೆ ಕರೆಯಲಾಗಿದ್ದು, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳು ವರ್ಚ್ಯುವಲ್ ಮೂಲಕ ಭಾಗಿಯಾಗಲಿದ್ದಾರೆ.

ಅಕ್ಟೋಬರ್‌ 15ರ ವರೆಗೆ ಪ್ರತಿ ನಿತ್ಯ 3,000 ಕ್ಯೂಸೆಕ್‌ ಕಾವೇರಿ ನೀರನ್ನು ತಮಿಳುನಾಡಿಗೆ (Tamil Nadu) ಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆಪ್ಟೆಂಬರ್‌ 29 ರಂದು ಆದೇಶಿಸಿತ್ತು. ಈ ಆದೇಶ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಸಭೆ ನಡೆಸುವ ಮೂಲಕ ನೀರಿ ಹರಿವು ಸರಿಯಾಗಿದೆಯೇ? ಅಣೆಕಟ್ಟುಗಳಲ್ಲಿ ಎಷ್ಟು ಪ್ರಮಾಣದ ನೀರಿನ ಸಂಗ್ರಹ ಇದೆ? ಜೊತೆಗೆ ಒಳ ಹರಿವು ಗಮನಿಸಿಕೊಂಡು ಮುಂದಿನ ಹಂತದಲ್ಲಿ ಹೊಸ ಆದೇಶ ನೀಡುವ ಸಾಧ್ಯತೆಗಳಿವೆ.

ತಮಿಳುನಾಡು ಸರ್ಕಾರದ (Tamil Nadu Government) ಪರವಾಗಿ ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ, ಮುಖ್ಯ ಎಂಜಿನಿಯರ್ ಸುಬ್ರಮಣ್ಯಂ ಮತ್ತು ಪಟ್ಟಾಭಿ ರಾಮನ್ ಭಾಗವಹಿಸಲಿದ್ದಾರೆ. ನಾಳಿನ ಸಭೆಯಲ್ಲಿ ತಮಿಳುನಾಡು ನಿತ್ಯ 13,000 ಕ್ಯೂಸೆಕ್ ನೀರು 15 ದಿನಗಳ ಕಾಲ ನೀರು ಬಿಡುವಂತೆ ಮನವಿ ಮಾಡಲು ನಿರ್ಧರಿಸಿದೆ. ಇದನ್ನೂ ಓದಿ: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್‌ ನೀರು ಹರಿಸಿ – ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

ಕರ್ನಾಟಕ ಸರ್ಕಾರವು (Government Of Karnataka) ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತಮ್ಮ ಅಣೆಕಟ್ಟುಗಳಲ್ಲಿ ಸಾಕಷ್ಟು ನೀರಿನ ಕೊರತೆ ಮತ್ತು ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಉಲ್ಲೇಖಿಸಿ ನಿತ್ಯ 3000 ಕ್ಯೂಸೆಕ್ ಅಡಿ ನೀರು ಬಿಡಲು ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಮನವಿ ಮಾಡಿದೆ. ಆದರೆ ಈವರೆಗೂ ಯಾವುದೇ ಆದೇಶ ರದ್ದಾಗಿಲ್ಲ, ಈ ನಡುವೆ ಮತ್ತೊಂದು ಸಭೆಗೆ ಸಿದ್ಧತೆ ನಡೆದಿದೆ. ಇದನ್ನೂ ಓದಿ: ತ.ನಾಡಿಗೆ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಕೇಂದ್ರ ನಿರ್ದೇಶನ ನೀಡಬೇಕು: ವಿಧಾನಸಭೆಯಲ್ಲಿ ಸ್ಟಾಲಿನ್‌ ನಿರ್ಣಯ ಮಂಡನೆ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಪಾಲಿಸಲು ಸೂಚಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಿ ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಪಾಸ್ ಮಾಡಿದೆ. ಈ ನಡುವೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಭೇಟಿಯಾಗಿರುವ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೀರು ಹರಿಸಲು ಆದೇಶ ನೀಡದಂತೆ ಸೂಚಿಸಲು ಒತ್ತಡ ಹೇರಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದ ನಿಲುವನ್ನು ಸಮರ್ಥಿಸುತ್ತೇನೆ – ಕಾವೇರಿ ಸಮಸ್ಯೆ ಪರಿಹಾರಕ್ಕೆ ಸಂಕಷ್ಟ ಸೂತ್ರ ರಚನೆಯಾಗಬೇಕು: SM ಕೃಷ್ಣ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್