ಅನಾರೋಗ್ಯದಿಂದ ಜಾಮೀನು ಪಡೆದಿದ್ದ ಲಾಲೂ ಪ್ರಸಾದ್‌ ಯಾದವ್‌ ಬ್ಯಾಡ್ಮಿಂಟನ್‌ ಆಟದಲ್ಲಿ ಬ್ಯುಸಿ

Public TV
3 Min Read

– ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಮೊರೆ ಹೋದ ಸಿಬಿಐ

ಪಾಟ್ನಾ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ರಾಷ್ಟ್ರೀಯ ಜನತಾ ದಳ (RJD) ನಾಯಕ ಲಾಲೂ ಪ್ರಸಾದ್‌ ಯಾದವ್‌ (Lalu Prasad Yadav) ಅನಾರೋಗ್ಯ ಕಾರಣಕ್ಕಾಗಿ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು, ಆದರೀಗ ಬ್ಯಾಡ್ಮಿಂಟನ್‌ (Badminton) ಆಡೋದ್ರಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಅನಾರೋಗ್ಯದ ಕಾರಣಕ್ಕಾಗಿ ಜಾರ್ಖಂಡ್ ಹೈಕೋರ್ಟ್ (Jharkhand High Court) ಲಾಲೂ ಪ್ರಸಾದ್‌ ಯಾದವ್‌ ಅವರಿಗೆ ಜಾಮೀನು ನೀಡಲಾಗಿತ್ತು. ಆದ್ರೆ ಜಾಮೀನು ಪಡೆದು ಜೈಲಿನಿಂದ ಹೊರಬಂದ ಲಾಲೂ ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಟ ಆಡದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಿರುವ ಸಿಬಿಐ (CBI), ಲಾಲೂ ಯಾದವ್ ಅವರ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ. ಆದ್ರೆ ಲಾಲೂ ಪ್ರಸಾದ್ ಯಾದವ್ ಪರ ವಕೀಲರು, ಇತ್ತೀಚೆಗಷ್ಟೇ ಲಾಲೂ ಪ್ರಸಾದ್ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಅವರ ಜಾಮೀನು ರದ್ದು ಮಾಡದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ’ತುಕ್ರ-ತನಿಯ’ ಕಥೆ ಹೇಳ್ತಿದ್ದಾರೆ ರಾಘು ಶಿವಮೊಗ್ಗ: ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್

ಮೇವು ಹಗರಣ ಸಂಬಂಧ ಬಿಹಾರದ ದೊರಾಂಡಾ ಖಜಾನೆಯಲ್ಲಿ ಇದ್ದ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ನ್ಯಾಯಾಲಯ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಆ ಬಳಿಕ ಆರೋಗ್ಯ ಸಂಬಂಧಿ ಕಾರಣಗಳಿಂದಾಗಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಪಡೆದು ಹೊರ ಬಂದ ಬಳಿಕ ಲಾಲೂ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ ಎಂದಿರುವ ಸಿಬಿಐ ಪರ ವಕೀಲರು, ಲಾಲೂ ಅವರ ಜಾಮೀನು ಏಕೆ ರದ್ದು ಮಾಡಬಾರದು? ಎಂದು ಸುಪ್ರೀಂ ಕೋರ್ಟ್‌ಗೆ ಕೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಹೊಸ ʻಎಲಿವೇಟೆಡ್ ವಾಕ್‌ವೇʼ ಆರಂಭ

ಸಿಬಿಐ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು, ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದ ಜಾರ್ಖಂಡ್ ಹೈಕೋರ್ಟ್‌ ಆದೇಶವು ದೋಷಪೂರಿತ ಹಾಗೂ ಕಾನೂನಾತ್ಮಕವಾಗಿ ಕೆಟ್ಟದ್ದು ಎಂದು ವಾದಿಸಿದ್ದಾರೆ. ಸಿಬಿಐನ ಈ ಮನವಿ ವಿರುದ್ಧ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಇತ್ತೀಚೆಗಷ್ಟೇ ಲಾಲೂ ಪ್ರಸಾದ್ ಯಾದವ್ ಅವರು ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದನ್ನು ಪರಿಗಣಿಸಿ ಜಾಮೀನು ಮುಂದುವರೆಸಿ ಎಂದು ಮನವಿ ಮಾಡಿದರು. ಅಷ್ಟೇ ಅಲ್ಲ, ಲಾಲೂ ಪ್ರಸಾದ್ ಯಾದವ್ ಅವರು ಈಗಾಗಲೇ 42 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದಾರೆ ಎಂದೂ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: Chandrayaan-3 ಲ್ಯಾಂಡರ್‌ನಿಂದ ಚಂದ್ರನ ಮೇಲೆ ಇಳಿಯುತ್ತಿರುವ ರೋವರ್ – ವೀಡಿಯೋ ರಿಲೀಸ್ ಮಾಡಿದ ಇಸ್ರೋ

ಇದಕ್ಕೆ ತಿರುಗೇಟು ನೀಡಿದ ಸಿಬಿಐ ಪರ ವಕೀಲರು, ಲಾಲೂ ಪ್ರಸಾದ್ ಯಾದವ್ ಅವರು 3.5 ವರ್ಷ ಜೈಲಿನಲ್ಲಿ ಇದ್ದರು. ಆದರೆ ಅವರಿಗೆ ವಿಧಿಸಿರುವ 5 ವರ್ಷಗಳ ಜೈಲು ಶಿಕ್ಷೆ ನಿರಂತರವಾಗಿ ಇರಬೇಕು. ಜೈಲಿನಿಂದ ಆರೋಗ್ಯ ಸಮಸ್ಯೆ ಕಾರಣಕ್ಕೆ ಹೊರ ಬಂದಿರುವ ಲಾಲೂ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ. ಇದನ್ನು ಗಮನಿಸಿದರೆ ನ್ಯಾಯಾಲಯ ಜಾಮೀನು ನೀಡಿರುವ ಆದೇಶವು ದೋಷಪೂರಿತ ಎಂಬಂತೆ ಕಾಣುತ್ತಿದೆ ಎಂದು ಹೇಳಿದರು. ಬಳಿಕ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಎ. ಎಸ್. ಬೋಪಣ್ಣ ಹಾಗೂ ಎಂ. ಎಂ. ಸುಂದರೇಶ್ ಅವರಿದ್ದ ಪೀಠವು ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 17ಕ್ಕೆ ಮುಂದೂಡಿದರು.

ಕೆಲ ದಿನಗಳ ಹಿಂದೆಯಷ್ಟೇ ಲಾಲೂ ಪ್ರಸಾದ್‌ ಯಾದವ್‌ ಅವರ ಮನೆ ಮೇಲೆ ದಾಳಿ ನಡೆದ್ದ ಜಾರಿ ನಿರ್ದೇಶನಾಲಯ ಲಾಲೂ ಪ್ರಸಾದ್‌ ಹಾಗೂ ಅವರ ಕುಟುಂಬಸ್ಥರಿಗೆ ಸೇರಿದ್ದ 6 ಕೋಟಿ ರೂ. ಮೌಲ್ಯದ ಆಸ್ತಿಯನ್ನ ಮುಟ್ಟುಗೋಲುಹಾಕಿಕೊಂಡಿತ್ತು.

ಏನಿದು ಮೇವು ಹಗರಣ?
1992 ರಿಂದ 1995ರ ಅವಧಿಯಲ್ಲಿ ಮೇವು ಹಗರಣ ನಡೆದಿತ್ತು. 950 ಕೋಟಿ ರೂ. ಮೊತ್ತದ ಭಾರೀ ಹಗರಣ ಇದಾಗಿದ್ದು, ಈ ಹಗರಣದಲ್ಲಿ ಲಾಲೂ ಪ್ರಸಾದ್‌ ಯಾದವ್‌ ಅವರನ್ನ ದೋಷಿ ಎಂದು ಪರಿಗಣಿಸಿ 5 ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್