ಬೆಂಗಳೂರಿನ ಶಂಕಿತ ಉಗ್ರರಿಗೆ ಗನ್ ಸಪ್ಲೈ ಮಾಡುತ್ತಿದ್ದ ಜಾಡು ಪತ್ತೆ ಹಚ್ಚಿದ ಸಿಸಿಬಿ

By
1 Min Read

ಬೆಂಗಳೂರು: ನಗರದಲ್ಲಿ ಶಂಕಿತ ಉಗ್ರರ (Suspected Militants) ಬಂಧನ ಪ್ರಕರಣಕ್ಕೆ ಸಂಬಂಧಿಸಿಂತೆ ಸಿಸಿಬಿ (CCB) ಅಧಿಕಾರಿಗಳು ಶಂಕಿತರಿಗೆ ಗನ್ ಸಪ್ಲೈ ಮಾಡಿದಾತನ ಜಾಡನ್ನು ಪತ್ತೆ ಮಾಡಿದ್ದಾರೆ.

ಜೂನ್‌ನಲ್ಲಿ ತುಮಕೂರು ರಸ್ತೆಯ ಟಿ ಬೇಗೂರಿನಲ್ಲಿ ಗನ್ ಇದ್ದ ಬ್ಯಾಗ್ ಅನ್ನು ಶಂಕಿತ ಉಗ್ರ ರಬ್ಬಾನಿ ಪಡೆದಿದ್ದ. ಜೈಲಲ್ಲಿ ಪರಿಚಯವಾಗಿದ್ದ ಪೋಕ್ಸೋ ಕೇಸ್‌ನ ಆರೋಪಿ ಬ್ಯಾಗ್ ತರ್ತಾನೆ ಎಂದು ಜುನೈದ್ ಹೇಳಿದ್ದ. ಅದರಂತೆ ಆತ ಹೇಳಿದ ವ್ಯಕ್ತಿಯಿಂದ ರಬ್ಬಾನಿ ಗನ್ ಇದ್ದ ಬ್ಯಾಗ್ ಪಡೆದಿದ್ದ. ಈ ಬ್ಯಾಗ್ ಅನ್ನು ರಬ್ಬಾನಿ ತಬ್ರೇಜ್‌ಗೆ ನೀಡಿದ್ದ.

ಇದೀಗ ಗನ್ ಇರುವ ಬ್ಯಾಗ್ ತಂದು ಕೊಟ್ಟಾತ ಕೂಡಾ ಆರ್‌ಟಿ ನಗರ ಹೆಬ್ಬಾಳ ಕಡೆಯವನು ಎನ್ನುವ ಶಂಕೆ ವ್ಯಕ್ತವಾಗಿದೆ. ಹೆಬ್ಬಾಳದ ಬಳಿ ಆಸ್ಪತ್ರೆಯೊಂದರಲ್ಲಿ ಗನ್ ತಂದುಕೊಟ್ಟವನ ಚಹರೆ ಪತ್ತೆಯಾಗಿದೆ. ಕಪ್ಪು ಬಣ್ಣದ ಕಾರಿನಲ್ಲಿ ಗನ್ ತಂದು ಕೊಟ್ಟಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: KRS ಡ್ಯಾಂ ಬರೋಬ್ಬರಿ 110 ಅಡಿ ಭರ್ತಿ – 48 ಗಂಟೆಯಲ್ಲಿ 5 ಟಿಎಂಸಿ ನೀರು ಒಳಹರಿವು

ಇದೀಗ ಸಿಸಿಬಿ ಅಧಿಕಾರಿಗಳು ತುಮಕೂರು ರಸ್ತೆಯ ಸಿಸಿಟಿವಿ ಹಾಗೂ ಹೆಬ್ಬಾಳ ಸಿಸಿಟಿವಿಯ ದೃಶ್ಯಗಳನ್ನು ಹೋಲಿಕೆ ಮಾಡಿ ನೋಡುತ್ತಿದ್ದಾರೆ. ಗನ್ ತಂದುಕೊಟ್ಟಾತ ಕೈಗೆ ಸಿಕ್ಕರೆ ಅರ್ಧ ಕೇಸ್ ಪೂರ್ಣಗೊಳ್ಳೋ ಸಾಧ್ಯತೆಯಿದೆ. ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಸಿಕ್ಕಿ ಬೀಳುತ್ತಲೇ 5,000 ರೂ. ಲಂಚವನ್ನು ಜಗಿದು ನುಂಗಿದ ಕಂದಾಯ ಅಧಿಕಾರಿ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್