ದೀಪ ಹಚ್ಚಿ ದೀಪಾವಳಿ ಆಚರಿಸಿ, ಹಸಿರು ಪಟಾಕಿಯನ್ನಷ್ಟೇ ಸಿಡಿಸಿ: ಈಶ್ವರ ಖಂಡ್ರೆ

By
2 Min Read

ಬೆಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು (Green Crackers) ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಮನವಿ ಮಾಡಿದ್ದಾರೆ.

ಈ ಸಂಬಂಧ ವಿಡಿಯೋ ಮೂಲಕ ಮನವಿ ಮಾಡಿರುವ ಅವರು, ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢ| ಮಾವೋವಾದಿಗಳು ಅಳವಡಿಸಿದ್ದ ಐಇಡಿ ಸ್ಫೋಟ – ಇಬ್ಬರು ಯೋಧರು ಹುತಾತ್ಮ

GREEN CRACKERS

ಹಸಿರು ಪಟಾಕಿ ಮಾತ್ರವೇ ಬಳಸಿ. ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಟಿಕೆಟ್‌ ಹೆಸರಲ್ಲಿ ವಂಚನೆ – ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್‌

125 ಡೆಸಿಬಲ್‌ಗಿಂತ ಕಡಿಮೆ ಶಬ್ದದ ಪಟಾಕಿಗೆ ಮಾತ್ರ ಅವಕಾಶ:
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂ ಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್‌ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ. ಇದನ್ನೂ ಓದಿ: ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ: ಬಸವರಾಜ ಬೊಮ್ಮಾಯಿ

ಮುಚ್ಚಳಿಕೆ ಬರೆಸಿಕೊಳ್ಳಲು ಸೂಚನೆ:
ಗಣಪತಿ ಹಬ್ಬದ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಮುಂದಿನ ಸಾಲಿನಿಂದ ಪಟಾಕಿ ಮಳಿಗೆ ಅನುಮತಿ ನೀಡದಂತೆ ತಿಳಿಸಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರು

ಸಂಘ ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಅದರಲ್ಲೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪಟಾಕಿ ತ್ಯಜಿಸುವಂತೆ ಇಲ್ಲವೇ ಹಸಿರು ಪಟಾಕಿ ಮಾತ್ರ ಬಳಸಲು ಮನವಿ ಮಾಡಬೇಕು ಎಂದೂ ಪರಿಸರ ಸಚಿವರು ಮನವಿ ಮಾಡಿದ್ದಾರೆ. ಹೆಚ್ಚು ಶಬ್ದ ಮತ್ತು ದಟ್ಟ ಹೊಗೆ ಹೊರಹೊಮ್ಮುವ ರಾಸಾಯನಿಕ ಮತ್ತು ಭಾರ ಲೋಹಯುಕ್ತ ಪಟಾಕಿಗಳಿಂದ ಉಸಿರಾಟಕ್ಕೂ ತೊಂದರೆ ಆಗುತ್ತದೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿಗಳಿಗೂ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ಪಟಾಕಿಗಳನ್ನು ತ್ಯಜಿಸೋಣ. ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಈ ಆಸ್ತಿ ಜಮೀರ್ ಅಹ್ಮದ್ ಅಪ್ಪಂದಾ?: ಯತ್ನಾಳ್ ಕಿಡಿ

Share This Article