ರಾಜ್ಯದಲ್ಲಿಯೂ ಪೊಲೀಸ್ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಆಚರಣೆ!

Public TV
1 Min Read

ಬೆಂಗಳೂರು/ಚಿತ್ರದುರ್ಗ/ರಾಯಚೂರು: ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ಆಗಿದ್ದರಿಂದ ಅದರ ಅಂಗವಾಗಿ ದೇಶಾದ್ಯಂತ ಆಚರಣೆ ಮಾಡಲಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿಯೂ ಬೆಂಗಳೂರು, ಚಿತ್ರದುರ್ಗ ಹಾಗೂ ರಾಯಚೂರಿನಲ್ಲಿಯೂ ಇಂದು ಆಚರಣೆ ಮಾಡಲಾಯಿತು.

ಬೆಂಗಳೂರಿನಲ್ಲಿ ಕೋರಮಂಗಲದ ಕೆಸ್‍ಎಸ್‍ಆರ್‍ಪಿ ಅವರಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಟ ಸುದೀಪ್ ಭಾಗಿಯಾಗಿದ್ದರು. 1959 ರಲ್ಲಿ ಭಾರತದ 10 ಪೊಲೀಸರನ್ನು ಚೀನಾ ಪಡೆ ಕೊಂದ ಹಿನ್ನೆಲೆಯಲ್ಲಿ ಪ್ರತಿ ವರ್ಷ ಅಕ್ಟೋಬರ್ 21 ರಂದು ‘ಪೊಲೀಸ್ ಹುತಾತ್ಮರ ದಿನ’ವನ್ನು ಆಚರಣೆಯಾಗಿ ಆಚರಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಗೃಹ ಮಂತ್ರಿ ಪರಮೇಶ್ವರ್, ಡಿಜಿ ಐಜಿಪಿ ನೀಲಮಣಿ ಎನ್ ರಾಜು, ಟಿ ಸುನೀಲ್ ಕುಮಾರ್, ನಗರ ಪೊಲೀಸ್ ಆಯುಕ್ತ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರು ಭಾಗಿಯಾಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ನಿಂದ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ.

ಚಿತ್ರದುರ್ಗದಲ್ಲೂ ಜಿಲ್ಲಾ ಶಸಸ್ತ್ರ ಮೀಸಲು ಪಡೆ ಆವರಣದಲ್ಲಿ ಇಂದು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಹುತಾತ್ಮರ ಪ್ರತಿಮೆಗೆ ಹೂ ಗುಚ್ಛ ಸಲ್ಲಿಸುವುದರ ಮೂಲಕ ಹುತಾತ್ಮ ಯೋಧರಿಗೆ ಭಾವಪೂರ್ಣ ಗೌರವವನ್ನು ಪೊಲೀಸ್ ಇಲಾಖೆ ಸಲ್ಲಿಸಿತು. ಇದೇ ವೇಳೆ ಪೊಲೀಸ್ ತುಕುಡಿಯಿಂದ ಮೂರು ಸುತ್ತು ಗುಂಡುಗಳನ್ನು ಹಾರಿಸಿ ವೀರಮರಣ ಹೊಂದಿದ ಪೊಲೀಸರಿಗೆ ಗೌರವ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್, ಜಿಲ್ಲಾಧಿಕಾರಿ ಆರ್ ಗಿರೀಶ್ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ವಸ್ತ್ರಮಠ ಭಾಗಿಯಾಗಿದ್ದರು.

ಸಮಾಜದ ರಕ್ಷಣೆಗೆ ಹೋರಾಡಿ ಮಣಿದ ಪೊಲೀಸ್ ರನ್ನ ನೆನೆದು ಗೌರವಿಸಲು ರಾಯಚೂರಿನಲ್ಲೂ ಪೊಲೀಸ್ ಹುತಾತ್ಮ ದಿನಾಚರಣೆಯನ್ನ ಅಚರಿಸಲಾಯಿತು. ನಗರದ ಡಿಎಆರ್ ಮೈದಾನದಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಬಾಬು, ಜಿಲ್ಲಾ ಪಂಚಾಯ್ತಿ ಸಿಇಓ ನಳಿನ್ ಅತುಲ್ ಭಾಗವಹಿಸಿ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *