ತಾರಾಲೋಕದಲ್ಲಿ ಕಲರ್‌ಫುಲ್ ಹೋಳಿ

Public TV
2 Min Read

ಹೋಳಿ ಹಬ್ಬವು ಹಿಂದೂಗಳ ಅತ್ಯಂತ ಪ್ರಸಿದ್ಧ ಮತ್ತು ದೇಶಾದ್ಯಂತ ಆಚರಿಸಲಾಗುವ ಹಬ್ಬಗಳಲ್ಲಿ ಒಂದಾಗಿದೆ. ಹೋಳಿಯನ್ನು ದೇಶದ ವಿವಿಧ ಭಾಗಗಳಲ್ಲಿ ವಿಭಿನ್ನ ರೀತಿಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ. ಈ ಬಾರಿ ಫಾಲ್ಗುಣ ಮಾಸದ ಹುಣ್ಣಿಮೆ ತಿಥಿಯಂದು ಅಂದರೆ ಮಾ.25ರಂದು ಹೋಳಿ ಹಬ್ಬವನ್ನು ಆಚರಿಸಲಾಗುವುದು.

ಹೋಳಿ ಹಬ್ಬ ಭಾರತೀಯ ಸಂಸ್ಕೃತಿಯ ಸಂಕೇತ. ಹೋಳಿ ಎಂದಾಕ್ಷಣ ಎಲ್ಲರಿಗೂ ಥಟ್ ಅಂತ ನೆನಪಾಗುವುದು ಬಣ್ಣ. ಒಬ್ಬರು ಮತ್ತೊಬ್ಬರಿಗೆ ಬಣ್ಣ ಹಚ್ಚುವುದು. ಇದೀಗ ಹೋಳಿ ಸಂಭ್ರಮಕ್ಕೆ ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದಾರೆ. ಸೆಲೆಬ್ರೇಶನ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ತಮ್ಮ ಕೆಲಸದ ನಡುವೆಯೇ ಹೋಳಿ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಈ ಬಾರಿ ನಮ್ಮೆಲ್ಲರಿಗೂ ಕೆಲಸದ ನಡುವೆಯೇ ಹೋಳಿ. ಆದರೆ ನೀವೆಲ್ಲರೂ ಸುರಕ್ಷಿತವಾಗಿ ಹೋಳಿ ಆಡುತ್ತಾ ಎಂಜಾಯ್ ಮಾಡುತ್ತಿದ್ದೀರಿ ಎಂದು ನಾನು ಭಾವಿಸಿದ್ದೇನೆ. ಇಲ್ಲಿಂದ ನಾವು ನಿಮಗೆ ಹೋಳಿ ಹಬ್ಬದ ಶುಭಾಶಯ ತಿಳಿಸುತ್ತೇವೆ ಎಂದು ತಮ್ಮ ತಂಡದ ಜೊತೆ ಇರುವ ಫೋಟೋವನ್ನ ರಶ್ಮಿಕಾ ಮಂದಣ್ಣ ಅವರು ಶೇರ್ ಮಾಡಿಕೊಂಡಿದ್ದಾರೆ.

 

View this post on Instagram

 

A post shared by Kriti Kharbanda (@kriti.kharbanda)

‘ಗೂಗ್ಲಿ’ ನಟಿ ಕೃತಿ ಕರಬಂಧ (Kriti Kharabanda) ಅವರು ಮದುವೆಯ ಬಳಿಕ ಪತಿ ಪುಲ್ಕಿತ್ ಸಾಮ್ರಾಟ್ ಜೊತೆ ರೊಮ್ಯಾಂಟಿಕ್ ಆಗಿ ಹೋಳಿ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ- ಪ್ರಿಯಾಂಕಾ (Priyanka Upendra) ದಂಪತಿ ಮನೆಯಲ್ಲಿ ಅದ್ಧೂರಿಯಾಗಿ ಹೋಳಿ ಸೆಲೆಬ್ರೇಶನ್ ಮಾಡಿದ್ದಾರೆ. ಉಪ್ಪಿ ಮನೆಯಲ್ಲಿ ತಾರೆಯರ ದಂಡೇ ಸೇರಿದೆ. ನಿರಂಜನ್, ಶರಣ್ಯಾ ಶೆಟ್ಟಿ, ಗುರುಕಿರಣ್ ದಂಪತಿ, ಪೂಜಾ ಲೋಕೇಶ್, ಗ್ರೀಷ್ಮಾ ಸೃಜನ್ ಲೋಕೇಶ್, ಶಿಲ್ಪಾ ಗಣೇಶ್ ಸೇರಿದಂತೆ ಅನೇಕರು ಭಾಗಿಯಾಗಿ ಸಂಭ್ರಮಿಸಿದ್ದಾರೆ.

ಚಂದನವನದ ನಟಿ ಸುಧಾರಾಣಿ (Sudharani) ಹೋಳಿ ಹಬ್ಬವನ್ನು ಡ್ಯಾನ್ಸ್ ಮಾಡುವ ಮೂಲಕ ಸೆಲೆಬ್ರೇಟ್ ಮಾಡಿದ್ದಾರೆ. ಕಲರ್ ಕಲರ್ ‌ ಎಂಬ ಹಾಡಿಗೆ ಜಬರ್‌ದಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ನಟಿಯ ಡ್ಯಾನ್ಸ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ಬಾಲಿವುಡ್‌ನ ಲವ್ ಬರ್ಡ್ಸ್ ಕಿಯಾರಾ ಅಡ್ವಾಣಿ- ಸಿದ್ಧಾರ್ಥ್ ಮಲ್ಹೋತ್ರಾ (Siddarth Malhotra) ಜೋಡಿ ಕೂಡ ಹೋಳಿ ಹಬ್ಬವನ್ನು ಕಲರ್‌ಫುಲ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಇದನ್ನೂ ಓದಿ:ಸೀಕ್ರೆಟ್ ಆಗಿ ಮದುವೆಯಾದ ನಟಿ ತಾಪ್ಸಿ ಪನ್ನು

ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಟೈಗರ್ ಶ್ರಾಫ್, ದಿಶಾ ಪಟಾನಿ (Disha Patani) ಹೋಳಿಯಲ್ಲಿ ಆಟವಾಡುತ್ತಾ ಒಬ್ಬರಿಗೊಬ್ಬರು ಬಣ್ಣ ಹಚ್ಚಿ ತರಲೆ ಮಾಡುತ್ತಾ ಸೆಲೆಬ್ರೇಟ್ ಮಾಡಿದ್ದಾರೆ. ಓಕಳಿ ವಿಡಿಯೋ ಇಂಟರ್‌ನೆಟ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ.

Share This Article