ಬಿಟಿಎಸ್ ರಜತೋತ್ಸವ – ಕೇಂದ್ರ ಐಟಿ ಸಚಿವ ವೈಷ್ಣವ್‍ಗೆ ಆಹ್ವಾನ

Public TV
1 Min Read

ನವದೆಹಲಿ: ನವೆಂಬರ್ 16ರಿಂದ ಆರಂಭವಾಗಲಿರುವ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್) ರಜತೋತ್ಸವ (BTS Rajathotsava) ವರ್ಷದ ಸಮಾವೇಶವನ್ನು ಉದ್ಘಾಟಿಸುವಂತೆ ಕೋರಿ ಕೇಂದ್ರ ಐಟಿ-ಬಿಟಿ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಅವರಿಗೆ ರಾಜ್ಯದ ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ (C.N. Ashwath Narayan) ಅವರು ಆಹ್ವಾನಿಸಿದ್ದಾರೆ.

ಮಂಗಳವಾರ ದೆಹಲಿಗೆ (New Delhi) ಬಂದಿಳಿದ ಅವರು, ಕೇಂದ್ರ ಸಚಿವರನ್ನು ಭೇಟಿ ಮಾಡಿ, ರಾಜ್ಯ ಸರ್ಕಾರದ ಪರವಾಗಿ ಈ ಆಮಂತ್ರಣ ನೀಡಿದರು. ಈ ಸಂದರ್ಭದಲ್ಲಿ ಬಿಟಿಎಸ್‍ನ ವೈಶಿಷ್ಟ್ಯಗಳನ್ನು ವಿವರಿಸಿದರು. ಇದೇ ವೇಳೆ ರಾಜ್ಯ ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್ ಉಪಸ್ಥಿತರಿದ್ದರು. ಇದನ್ನೂ ಓದಿ: ಅಯೋಧ್ಯೆಯಿಂದ ಶ್ರೀಲಂಕಾಗೆ ಶ್ರೀರಾಮ ನಡೆದದ್ದಕ್ಕಿಂತ ಹೆಚ್ಚು ರಾಹುಲ್‌ ಗಾಂಧಿ ಪಾದಯಾತ್ರೆ ಮಾಡ್ತಿದ್ದಾರೆ – ಕಾಂಗ್ರೆಸ್‌ ನಾಯಕ

ಅರುಣ್ ಸಿಂಗ್‍ಗೂ ಆಹ್ವಾನ
ನ.11ರಂದು ಪ್ರಧಾನಿ ನರೇಂದ್ರ ಮೋದಿ (Narendra Modi)  ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ನೆರವೇರಿಸಲಿರುವ ನಾಡಪ್ರಭು ಕೆಂಪೇಗೌಡರ (Kempegowda) 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭ ಮತ್ತು ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ (ಬಿಟಿಎಸ್) ಬರುವಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ಅವರಿಗೂ ಅಶ್ವತ್ಥ ನಾರಾಯಣ ಆಹ್ವಾನ ನೀಡಿದ್ದಾರೆ.

ಕೆಂಪೇಗೌಡರ ಪ್ರತಿಮೆ ಅನಾವರಣದ ಅಂಗವಾಗಿ ಮೋದಿ ಅಧ್ಯಕ್ಷತೆಯಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಇದರಲ್ಲಿ ಭಾಗವಹಿಸುವಂತೆ ಸಚಿವರು ಸಿಂಗ್ ಅವರಿಗೆ ತಿಳಿಸಿದರು. ಇದನ್ನೂ ಓದಿ: ನನ್ನನ್ನು ಪ್ಯಾಕೇಜ್ ಸ್ಟಾರ್ ಅನ್ನೋರಿಗೆ ಚಪ್ಪಲೀಲಿ ಹೊಡೀತೀನಿ: ಪವನ್ ಕಲ್ಯಾಣ್ ಆನ್ ಫೈಯರ್

ಯುದ್ಧ ಸ್ಮಾರಕಕ್ಕೆ ಭೇಟಿ
ನಂತ ಅಶ್ವತ್ಥನಾರಾಯಣ ಅವರು ರಾಷ್ಟ್ರ ರಾಜಧಾನಿಯಲ್ಲಿ ಇರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು. ಸ್ಮಾರಕವನ್ನು ಸಾಮಾನ್ಯ ಪ್ರವಾಸಿಗರಂತೆ ಸುತ್ತು ಹಾಕಿದ ಅವರು, ಅಲ್ಲಿಯ ಸ್ಮಾರಕಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಅಲ್ಲಿಯ ವಿವರಗಳನ್ನು ಕುತೂಹಲದಿಂದ ವೀಕ್ಷಿಸಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *