ಹೆಚ್ಚುತ್ತಿರುವ ತಾಪಮಾನ, ಮಾರ್ಚ್‌ನಿಂದ ಮೇವರೆಗೂ ಹೈ ಅಲರ್ಟ್ 

Public TV
2 Min Read

ನವದೆಹಲಿ: ಮುಂಬರುವ ದಿನಗಳಲ್ಲಿ ವಾತಾವರಣದಲ್ಲಿ (Weather) ತಾಪಮಾನ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಜನರು ಮಧ್ಯಾಹ್ನ 12 ರಿಂದ 3ಗಂಟೆವರೆಗೂ ಮನೆಯಿಂದ ಹೊರ ಬರುವುದನ್ನು ಕಡಿಮೆ ಮಾಡಿ. ನಿಗದಿತವಾಗಿ ನಿಂಬೆ ಹಣ್ಣಿನ ಜ್ಯೂಸ್ ಸೇರಿದಂತೆ ತಂಪು ಪಾನಿಯಗಳನ್ನು ಸೇವಿಸಲು ಕೇಂದ್ರ ಆರೋಗ್ಯ ಇಲಾಖೆ (Central Health Department) ಮನವಿ ಮಾಡಿದೆ.

ಮಾರ್ಚ್‌ನಿಂದ ಮೇವರೆಗೂ ಬಿಸಿಗಾಳಿ ಬೀಸಲಿದ್ದು, ತಾಪಮಾನದಲ್ಲಿ ಏರಿಕೆ ಕಂಡು ಬರಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಗಮನ ಹರಿಸಲು ಹಲವು ಸಲಹೆಗಳನ್ನು ಕೇಂದ್ರ ಆರೋಗ್ಯ ಇಲಾಖೆ ನೀಡಿದೆ‌. ಬಾಯಾರಿಕೆಯಾಗದಿದ್ದರೂ ನಿರಂತರವಾಗಿ ನೀರು ಕುಡಿಯಬೇಕು. ಓರಲ್ ರೀಹೈಡ್ರೇಶನ್ ಸೊಲ್ಯೂಷನ್ (ORS) ಅನ್ನು ಬಳಸುವಂತೆ ಕೇಳಿಕೊಂಡಿದೆ.

ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವಾಗ ತೆಳು, ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಲು ಮತ್ತು ಛತ್ರಿ, ಟೋಪಿ, ಕ್ಯಾಪ್, ಟವೆಲ್ ಮತ್ತು ಇತರ ಸಾಂಪ್ರದಾಯಿಕ ವಸ್ತುಗಳನ್ನು ಬಳಸಬೇಕು. ಹಗಲಿನಲ್ಲಿ ಸೂರ್ಯನ ಕಿರಣಗಳು ನೇರವಾಗಿ ಬೀಳುವ ಕಿಟಕಿಗಳನ್ನು ಬಂದ್ ಮಾಡಿ, ರಾತ್ರಿ ವೇಳೆಯಲ್ಲಿ ಮಾತ್ರ ತೆರೆಯುವಂತೆ ಮನವಿ ಮಾಡಿದೆ.

weather

ಶಿಶುಗಳು ಮತ್ತು ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ಮಾಡುವ ಜನರು, ಮಾನಸಿಕ ಅಸ್ವಸ್ಥತೆ ಹೊಂದಿರುವ ಜನರು, ದೈಹಿಕವಾಗಿ ಅಸ್ವಸ್ಥರಾಗಿರುವ ಜನರು, ವಿಶೇಷವಾಗಿ ಹೃದ್ರೋಗ ಅಥವಾ ಅಧಿಕ ರಕ್ತದೊತ್ತಡ ಹೊಂದಿರುವವರು, ತಂಪಾದ ವಾತಾವರಣದಿಂದ ಬಿಸಿ ವಾತಾವರಣಕ್ಕೆ ಬರುವ ಜನರು ಹೆಚ್ಚು ನೀರು ಸೇವಿಸಬೇಕು ಎಂದು ಸಲಹೆಯಲ್ಲಿ ಹೇಳಿದೆ. ಇದನ್ನೂ ಓದಿ: ಕಿಡ್ನಿ ಸಮಸ್ಯೆಯಿಂದ ಪ್ರಧಾನಿ ಮೋದಿ ಸಹೋದರ ಆಸ್ಪತ್ರೆಗೆ ದಾಖಲು

weather

ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳು ಅಥವಾ ಹೆಚ್ಚಿನ ಪ್ರಮಾಣದ ಸಕ್ಕರೆಯೊಂದಿಗೆ ಪಾನೀಯಗಳು ದೇಹದಲ್ಲಿ ನೀರಿನ ಅಂಶ ನಷ್ಟಕ್ಕೆ ಕಾರಣವಾಗಬಹುದು ಅಥವಾ ಹೊಟ್ಟೆ ನೋವಿಗೆ ಕಾರಣವಾಗಬಹುದು. ಈ ಹಿನ್ನೆಲೆಯಲ್ಲಿ ಇವುಗಳನ್ನು ಸೇವಿಸದಂತೆ ಹೆಚ್ಚಿನ ಪ್ರೋಟೀನ್ ಆಹಾರ ಮತ್ತು ಹಳಸಿದ ಆಹಾರವನ್ನು ತ್ಯಜಿಸಲು ಸೂಚಿಸಿದೆ.

ಫೆಬ್ರವರಿಯಲ್ಲಿ ಈ ವರ್ಷ ತಾಪಮಾನದಲ್ಲಿ ಅಸಹಜ ಏರಿಕೆ ಕಂಡುಬಂದಿದೆ. ಶಿಮ್ಲಾದಲ್ಲಿ ಫೆಬ್ರವರಿಯಲ್ಲಿ ದಾಖಲಾದ ಗರಿಷ್ಠ ತಾಪಮಾನ ದಾಖಲಾಗಿದೆ. ಫೆಬ್ರವರಿ 21ರವರೆಗೆ ಗುಜರಾತ್ ಮತ್ತು ಮಹಾರಾಷ್ಟ್ರ-ಗೋವಾ ಪ್ರದೇಶದ ಕೆಲವು ಭಾಗಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಮುಂಬರುವ ದಿನಗಳಲ್ಲಿ ಉಳಿದ ರಾಜ್ಯಗಳಲ್ಲಿ ವಾತಾವರಣದಲ್ಲಿ ಬಿಸಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ – ಈಶ್ವರಪ್ಪ ಪ್ರಶ್ನೆ

Share This Article
Leave a Comment

Leave a Reply

Your email address will not be published. Required fields are marked *