ಗುರುವಾರದಿಂದ CET ಪರೀಕ್ಷೆ- ಹಿಜಬ್, ವಾಚ್ ನಿಷೇಧ, ಮಾಸ್ಕ್, ಹಾಫ್ ಶರ್ಟ್ ಕಡ್ಡಾಯ

Public TV
2 Min Read

ಬೆಂಗಳೂರು: ನಾಳೆಯಿಂದ ಸಿಇಟಿ ಪರೀಕ್ಷೆ ಪ್ರಾರಂಭವಾಗಲಿದೆ. ಪರೀಕ್ಷೆಗೆ ಕೆಇಎ ಸಕಲ ಸಿದ್ಧತೆ ಮಾಡಿಕೊಂಡಿದ್ದು, ನೀಟ್ ಮಾದರಿಯಲ್ಲಿ ಕಠಿಣ ಮಾರ್ಗಸೂಚಿಗಳನ್ನ ಜಾರಿ ಮಾಡ್ತಿದೆ. ಇಡೀ ಪರೀಕ್ಷಾ ವ್ಯವಸ್ಥೆ ವೀಡಿಯೋ ಚಿತ್ರೀಕರಣವಾಗಲಿದೆ.

ನಾಳೆಯಿಂದ 3 ದಿನಗಳ ಕಾಲ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದೆ. ಈ ಬಾರಿ 2,16,525 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ರಾಜ್ಯದ 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನ 87 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ಜೂನ್ 18 ರಂದು ನಡೆಯಲಿದ್ದು, 1708 ವಿದ್ಯಾರ್ಥಿಗಳು ನೋಂದಣಿ ಆಗಿದ್ದಾರೆ. ಇವರಿಗೆ ಗಡಿಭಾಗದ ಜಿಲ್ಲೆಗಳಾದ ಬೆಂಗಳೂರು, ಬೀದರ್, ಬೆಳಗಾವಿ, ವಿಜಯಪುರ, ಬಳ್ಳಾರಿ, ಮಂಗಳೂರಿನಲ್ಲಿ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಗೆ 486 ವೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, 972 ವಿಶೇಷ ತಪಾಸಣೆ ದಳ ಸೇರಿ 20 ಸಾವಿರ ಅಧಿಕಾರಿಗಳು ಪರೀಕ್ಷಾ ಕೆಲಸ ನಿರ್ವಹಣೆ ಮಾಡಲಿದ್ದಾರೆ. ಇದನ್ನೂ ಓದಿ: ಹಿಂದಿ ಭಾಷೆ ಬರುವ ಶಾಲಾ, ಕಾಲೇಜು ಮಕ್ಕಳಿಗಷ್ಟೇ ಪ್ರವಾಸ ಭಾಗ್ಯ- ಶಿಕ್ಷಣ ಇಲಾಖೆ ಆದೇಶ

ಸಿಇಟಿ ಪರೀಕ್ಷೆಗೆ ನೀಟ್ ಮಾದರಿಯ ನಿಯಮ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ನಿಷೇಧ ಮಾಡಲಾಗಿದೆ. ತಲೆ ಮತ್ತು ಕಿವಿ ಮುಚ್ಚಿಕೊಳ್ಳುವ ವಸ್ತ್ರ ಧರಿಸಬಾರದು. ವಿದ್ಯಾರ್ಥಿಗಳು ಆಫ್ ಶರ್ಟ್ ಮಾತ್ರ ಹಾಕಬೇಕು. ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧ ಮಾಡಲಾಗಿದೆ. ಕೈ ಗಡಿಯಾರವನ್ನು ಪರೀಕ್ಷಾ ಕೇಂದ್ರಕ್ಕೆ ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ. 70% ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಎಲ್ಲಿ ಸಿಸಿ ಟಿವಿ ಇರೋದಿಲ್ಲವೋ ಅಲ್ಲಿ ವೀಡಿಯೋ ಚಿತ್ರೀಕರಣ ಮಾಡಲಾಗುತ್ತದೆ. ಖಜಾನೆಯಿಂದ ಪರೀಕ್ಷಾ ಕೇಂದ್ರದವರೆಗೂ ವೀಡಿಯೋ ಚಿತ್ರೀಕರಣಕ್ಕೆ ನಿರ್ಧಾರ ಮಾಡಲಾಗಿದೆ.

ಪ್ರಶ್ನೆ ಪತ್ರಿಕೆ ಕನ್ನಡ ಮತ್ತು ಇಂಗ್ಲೀಷ್ ಎರಡು ಭಾಷೆಯಲ್ಲಿ ಇರಲಿದೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ಜೊತೆ ಆಧಾರ್ ಕಾರ್ಡ್, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಯಾವುದಾದರೂ ಒಂದು ಸೂಕ್ತ ಗುರುತಿನ ಪತ್ರ ವಿದ್ಯಾರ್ಥಿಗಳು ತರಬೇಕು. ಪರೀಕ್ಷೆಯ ಮೊದಲ ದಿನವಾದ ನಾಳೆ ಜೀವಶಾಸ್ತ್ರ ಮತ್ತು ಗಣಿತ ಪರೀಕ್ಷೆಗಳು ನಡೆಯಲಿದ್ದು, ಜೂನ್ 17 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪರೀಕ್ಷೆಗಳು ನಡೆಯಲಿವೆ.

Live Tv

Share This Article
Leave a Comment

Leave a Reply

Your email address will not be published. Required fields are marked *