ಹಿಂದೂಗಳು ಮತಾಂತರ ಮಾಡುವಂತೆ ಬಹಿರಂಗವಾಗಿ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ

Public TV
4 Min Read

-‌ ಯಾರಾದ್ರೂ ಮತಾಂತರ ಆಗಬೇಕು ಅಂದ್ರೆ ಪ್ರೀತಿಯಿಂದ ಕರೀರಿ
– ನಮ್ಮ ಹೆಣ್ಮಕ್ಕಳಿಗೆ ಗಂಡು ಮಕ್ಕಳ ಪಕ್ಕ ಕೂರಬೇಡಿ ಅಂದಿಲ್ಲ; ಚಿಂತಕ

ಮಂಗಳೂರು: ಇತ್ತೀಚೆಗಷ್ಟೇ ʻಹಿಂದೂ ಯುವಕರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿʼ ಎಂದು ಕರೆ ನೀಡಿ ವಿವಾದಕ್ಕೀಡಾಗಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉಜಿರೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹಿಂದೂಗಳು ಮತಾಂತರ (Conversion) ಮಾಡುವಂತೆ ಬಹಿರಂಗವಾಗಿ ಕರೆ ಕೊಟ್ಟಿದ್ದಾರೆ.

ಉಜಿರೆಯ ರಾಮೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುತ್ತಾ ಮಾತನಾಡಿದ ಅವರು, ಹಿಂದೂಗಳು ಮತಾಂತರ ಮಾಡುವಂತೆ ಬಹಿರಂಗ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಎಡಪಂಥೀಯರು ಹಿಂದೂಗಳನ್ನ ಜಾತಿ, ಮತ, ಪಂಥಗಳ ಹೆಸರಿನಲ್ಲಿ ವಿಭಜಿಸುತ್ತಾರೆ: ಚಕ್ರವರ್ತಿ ಸೂಲಿಬೆಲೆ

ಇತ್ತೀಚೆಗೆ ಬಜರಂಗದಳದವರು (Bajrang Dal) ಸಂಕಲ್ಪ ತಗೊಂಡಿದ್ದಾರೆ. ಹಿಂದೂಗಳ ಸಂಖ್ಯೆ ಜಾಸ್ತಿ ಮಾಡಲು ಏನು ಐಡಿಯಾ ಇದೆ ಅಂತ ಕೇಳಿದಾಗ ಹೆಚ್ಚು ಮಕ್ಕಳನ್ನು ಮಾಡುವಂತೆ ಮನವಿ ಮಾಡಿಕೊಳ್ತೇವೆ ಅಂತ ಹೇಳಿದ್ರು. ಆದ್ರೆ ನಮ್ಮ ಜನ 2-3 ಮಕ್ಕಳನ್ನ ಮಾಡ್ತಾರೇನ್ರೀ? ನಮ್ಮ ಜನರಿಗೆ ಅವರ ಮಕ್ಕಳನ್ನು ಪಂಚರ್ ಹಾಕಲು ಕಳುಹಿಸಲು ಇಷ್ಟ ಇಲ್ಲ. ಅವರಿಗೆ ನಮ್ಮ ಮಕ್ಕಳು ಚೆನ್ನಾಗಿ ಓದಿ ಡಾಕ್ಟರ್, ಇಂಜಿನಿಯರ್ ಆಗಿ ಮಾಡಬೇಕು ಅನ್ನೋದಷ್ಟೇ ಇದೆ. ಹಾಗಾಗಿ ಓದಿಸೋ ಕೆಪಾಸಿಟಿ ಇಲ್ಲದ ಕಾರಣ ಒಂದು ಸಾಕು, ಎರಡು ಸಾಕು ಅಂತಾರೆ. ಹಾಗಾಗಿ ಸರ್ಕಾರ ನಮಗಾಗಿ ಮಾಡಿರೋ ಕಾನೂನುಗಳನ್ನು ಬಳಸಿಕೊಳ್ಳಿ ಅಂತ ಕರೆ ಕೊಟ್ಟಿದ್ದಾರೆ.

ಪೊಲೀಸರಿಗೂ ಹೇಳ್ತಾ ಇದೀನಿ, ಇದು ಸರ್ಕಾರ ಕೊಟ್ಟಿರೋ ಕಾನೂನು, ನಮ್ಮದಲ್ಲ. ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು, ಹೊಸ ಸರ್ಕಾರ ಬಂದು ಆ ಕಾನೂನು ತೆಗೆದು ಹಾಕಿತು. ಅಂದರೆ ಅದರ ಅರ್ಥ ನೀವೂ ಮತಾಂತರ ಮಾಡಬಹುದು ಅಂತ. ಸರ್ಕಾರವೇ ಧೈರ್ಯವಾಗಿ ಹೇಳಿದೆ, ಮತಾಂತರ ಮಾಡಿ ಅಂತ, ಹಾಗಿದ್ದಾಗ ನಾವು ಮಾಡಬೇಕಲ್ವಾ? ಜಗತ್ತಿನ ಯಾವ ರಾಷ್ಟ್ರದಲ್ಲೂ ಈ ರೀತಿಯ ಪರಿಸ್ಥಿತಿ ಇಲ್ಲ. ಹಾಗಾಗಿ ಮತಾಂತರ ಮಾಡಿ, ಸರ್ಕಾರವೇ ಅಧಿಕೃತವಾಗಿ ಹೇಳಿದೆ, ಮಾಡಲು ನಿಮಗೆ ಕಷ್ಟ ಏನು? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

ಮತಾಂತರ ಮಾಡೋದು ಕಷ್ಟ ಏನಿಲ್ಲ, ನಾನು ಜಗತ್ತಿನ ಅತ್ಯಂತ ಶ್ರೇಷ್ಠ ಹಿಂದೂ ಧರ್ಮಕ್ಕೆ ಸೇರಿದವನು. ಜಗತ್ತಿನಲ್ಲಿ ಅನೇಕ ಮತ ಪಂಥಗಳಿವೆ, ಆದರೆ ಅವರಿಗೆಲ್ಲಾ ಒಬ್ಬನೇ ದೇವರು. ಒಬ್ಬ ದೇವರಿಗೆ ಸಮಸ್ಯೆಯಾದ್ರೆ ಆ ಧರ್ಮವೇ ಹೋಯಿತು, ಆದರೆ ನಮಗೆ 33 ಕೋಟಿ ದೇವತೆಗಳು. ನೀವು ರಾಮನನ್ನ ಬೈದರೆ ನಾನು ಸೀತೆಯನ್ನ ಹಿಡಿದುಕೊಳ್ತೀನಿ. ನೀವು ಸೀತೆಗೆ ಕಳಂಕ ತರೋ ಪ್ರಯತ್ನ ಪಟ್ಟರೆ ಶ್ರೀಕೃಷ್ಣ ಇದ್ದಾನೆ. ಕೃಷ್ಣನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನಮಗೆ ಮಂಜುನಾಥಸ್ವಾಮಿ ಇದ್ದಾನೆ. ನೀವು ಮಂಜುನಾಥನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನನಗೆ ಊರಲ್ಲೊಂದು ದೇವಸ್ಥಾನ ಇದೆ, ಎಲ್ಲಿ ಬೇಕಾದರೂ ಹೋಗ್ತೀನಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಪ್ಲೀಸ್ ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು ವಿದ್ಯಾರ್ಥಿಯ ವಿಚಿತ್ರ ಬೇಡಿಕೆ

ಹಾಗಾಗಿ ಅವರಿಗೆ ಹೇಳಿ, ಒಂದೇ ದೇವರು ಒಳ್ಳೆಯದೋ ಅಥವಾ 33 ಕೋಟಿ ದೇವರು ಒಳ್ಳೆಯದೋ? ಅಂಥ. ಮಿತ್ರರೇ ಅವರು ಬಂದು ಹೇಳ್ತಾರೆ, ನಮ್ಮದೊಂದೇ ಪುಸ್ತಕ, ನಿಮ್ಮತ್ರ ಬಹಳ ಪುಸ್ತಕ ಇದೆ ಅಂತ. ಆಗ ನೀವು ಹೇಳಿ, ನಮ್ಮತ್ರ ಲೈಬ್ರಿರಿ ಇದೆ, ಯಾವುದೋ ಒಂದು ಪುಸ್ತಕ ಸುಡೋದ್ರಿಂದ ಹಿಂದೂ ಧರ್ಮ ಸಾಯಲ್ಲ. ನಿಮ್ಮ ಮತ-ಪಂಥಗಳಲ್ಲಿ ಹೆಣ್ಮಕ್ಕಳಿಗೆ ಗೌರವ ಇಲ್ಲ ಅಂತ ಅವರಿಗೆ ಹೇಳಿ. ಇಲ್ಲಿರೋ ಹೆಣ್ಮಕ್ಕಳಿಗೆ ಮುಖ ಮುಚ್ಚಿಕೊಳ್ಳಿ ಅಂತ ಹೇಳಿಲ್ಲ, ಗಂಡು ಮಕ್ಕಳ ಪಕ್ಕದಲ್ಲಿ ಕೂರಬೇಡಿ ಅಂತ ಹೇಳಿಲ್ಲ. ಬರೋರಿಗೆ ಬನ್ನಿ ಅಂತ ಹೇಳಿ, ಬರುವವರನ್ನು ಮುಕ್ತ ಕಂಠದಿಂದ ಸ್ವಾಗತಿಸಿ, ಸಂಖ್ಯೆ ವೃದ್ಧಿಸಲು ಮಕ್ಕಳೇ ಆಗಬೇಕೆಂದಿಲ್ಲ, ನಮ್ಮ ಹೃದಯ ಸ್ವಲ್ಪ ವಿಶಾಲ ಆಗಬೇಕಿದೆ ಎಂದು ಕರೆ ಕೊಟ್ಟಿದ್ದಾರೆ.

ಸೇವೆ ಮಾಡೋದು ನಿಮ್ಮ ಸಮಾಜ ಮಾತ್ರ ಅಲ್ಲ, ನಮ್ಮ ಸಮಾಜ ಮಾಡೋ ಸೇವೆ ಯಾವ ಧರ್ಮ ಮಾಡಿದೆ? ಇಂಥ ಸೇವೆ ಮಾಡೋ ಸಮಾಜ ಮತ್ತೊಂದಿಲ್ಲ ಅಂತ ಹೇಳಿ ನಮ್ಮ ಸಮಾಜಕ್ಕೆ ಕರೆಯಿರಿ. ನಮ್ಮ ಸಮಾಜದ ಎಲ್ಲಾ ಪ್ರಮುಖರು ಈ ಬಗ್ಗೆ ಒಂದು ಘೋಷಣೆ ಹೊರಡಿಸಿ. ಯಾರಾದರೂ ನಮಗೆ ಮತಾಂತರ ಆಗಬೇಕು ಅಂದ್ರೆ ನಮ್ಮ ಸಮಾಜ ಅವರನ್ನ ಪ್ರೀತಿಯಿಂದ ಸ್ವಾಗತಿಸುತ್ತೆ ಬನ್ನಿ ಅಂತ ಕರೀರಿ. ಸಮಾಜದ ಸ್ವಾಮೀಜಿಗಳ ಮೂಲಕ ಘೋಷಣೆ ಕೊಡಲಿ, ಯಾರಾದ್ರೂ ಬರ್ತೀರ ಅಂತಾದರೆ ಜಾತಿ ಕೇಳದೇ ಕರೆಯಿರಿ, ನೀವು ಒಂದು ಸಲ ಮುಕ್ತ ಕಂಠದಿಂದ ಕರೀರಿ, ಎಷ್ಟು ಜನ ಸೈಲೆಂಟಾಗಿ ಸೇರಿಕೊಳ್ತಾರೆ ನೋಡಿ ಎಂದು ಬಹಿರಂಗವಾಗಿಯೇ ಮತಾಂತರಕ್ಕೆ ಕರೆ ಕೊಟ್ಟಿದ್ದಾರೆ.

ಜನಸಂಖ್ಯೆ ಜಾಸ್ತಿ ಮಾಡಲು ಸರ್ಕಾರವೇ ಕೊಟ್ಟ ಇಂಥ ಕಾನೂನುಗಳು ನಮ್ಮಲ್ಲಿವೆ. ಹಾಗಾಗಿ ಸಂಖ್ಯೆ ವಿಸ್ತರಿಸಲು ಈ ರೀತಿಯಲ್ಲಿ ನಾವು ಕೆಲಸ ಮಾಡಬೇಕಿದೆ. ಮುಂದಿನ ಪೀಳಿಗೆಗೆ ಭಾರತ ಬಿಟ್ಟು ಕೊಟ್ಟು ಹೋಗುವಾಗ ಅದಕ್ಕೆ ಸ್ವಲ್ಪ ಪಾಕಿಸ್ತಾನ, ಬಾಂಗ್ಲಾದೇಶ, ಅಗತ್ಯ ಬಿದ್ದರೆ ನೇಪಾಳವನ್ನೂ ಸೇರಿಸೋಣ ಎಂದು ಹೇಳಿದ್ದಾರೆ.

Share This Article