ಸರ್ಕಾರದ ಓಲೈಕೆ ರಾಜಕಾರಣದಿಂದ ಜನರಿಗೆ ತೊಂದರೆ: ಛಲವಾದಿ ನಾರಾಯಣಸ್ವಾಮಿ

Public TV
1 Min Read

ಬೆಂಗಳೂರು: ಮುಖ್ಯಮಂತ್ರಿಗಳು ಸರ್ವರನ್ನೂ ಜೊತೆಯಾಗಿ ಒಯ್ಯುವ ಕಾರ್ಯ ಮಾಡುತ್ತಿಲ್ಲ. ಗಣೇಶ ವಿಸರ್ಜನೆ ವೇಳೆ ಆಗುತ್ತಿರುವ ಅಹಿತಕರ ಘಟನೆಗಳಿಗೆ ಸರ್ಕಾರವೇ ಹೊಣೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಸರ್ಕಾರ ಒಂದು ಕಡೆ ವಾಲಿದ್ದರಿಂದ ಇಂದು ಈ ಪರಿಸ್ಥಿತಿ ಎದುರಾಗುತ್ತಿದೆ. ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಸರ್ಕಾರ ಹೀಗೆ ನಡೆದುಕೊಂಡರೆ ಸರಿಯೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ

ಮದ್ದೂರಿನಲ್ಲಿ (Maddur) ಭಾನುವಾರ ಗಣೇಶ ವಿಸರ್ಜನೆ ಸಮಯದಲ್ಲಿ ಅಚಾತುರ್ಯದ ಘಟನೆಗಳು ನಡೆದಿವೆ. ಇದು ಕಾಂಗ್ರೆಸ್ ತನ್ನ ಮತ ಬ್ಯಾಂಕನ್ನು ಭದ್ರಪಡಿಸಿಕೊಳ್ಳಲು ಕೆಲವು ರೀತಿಯ ಓಲೈಕೆಗಳನ್ನು ಮಾಡಿದ್ದರಿಂದ ಇಡೀ ರಾಜ್ಯದಲ್ಲಿ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪ್ರತಾಪ್ ತಂದೆ-ತಾಯಿ ದೈವ ಭಕ್ತರಿರಬೇಕು, ಇಲ್ಲಂದ್ರೆ ಕೋತಿ ಅಂತ ಹೆಸರಿಡ್ತಿದ್ರು: ಪ್ರದೀಪ್ ಈಶ್ವರ್

ಗಣೇಶ ವಿಸರ್ಜನೆಗೆ ನೀವು ಅವಕಾಶವನ್ನೂ ಕೊಡುತ್ತಿಲ್ಲ. ಚಿತ್ರದುರ್ಗದಲ್ಲಿ ಮೆರವಣಿಗೆಗೆ ಅವಕಾಶ ಕೊಡುವುದಿಲ್ಲ ಎಂದು ಎಸ್ಪಿ ಆದೇಶ ಹೊರಡಿಸಿದ್ದಾರೆ. ನಮ್ಮೂರಿನಲ್ಲಿ ಆಚರಿಸುವುದಕ್ಕೆ ನಮಗೆ ನೀವು ಅನುಮತಿ ಕೊಡಬೇಕೇ ಎಂದು ಗುಡುಗಿದ್ದಾರೆ.

Share This Article