10ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ಜ್ಯೂನಿಯರ್ ದರ್ಶನ್

Public TV
1 Min Read

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರ ವಿನೀಶ್ ಇಂದು 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾನೆ. ಹೀಗಾಗಿ ತಾಯಿ ವಿಜಯಲಕ್ಷ್ಮೀ ಇಂದು ತಮ್ಮ ಟ್ವಿಟ್ಟರಿನಲ್ಲಿ ಮಗನ ಫೋಟೋ ಹಾಕಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ವಿಜಯಲಕ್ಷ್ಮೀ ವಿನೀಶ್ ಫೋಟೋವನ್ನು ಟ್ವಿಟ್ಟರಿನಲ್ಲಿ ಹಾಕಿ ಅದಕ್ಕೆ, “ನನ್ನ ಚಿಕ್ಕ ಹುಡುಗನಿಗೆ ಈಗ 10 ವರ್ಷ” ಎಂದು ಹೇಳುತ್ತಾ ಬರ್ತ್ ಡೇ ಬಾಯ್ ಎಂಬ ಹ್ಯಾಶ್‍ಟ್ಯಾಗ್ ಬಳಸಿ ಶುಭ ಹಾರೈಸಿದ್ದಾರೆ.

ವಿನೀಶ್ ಹುಟ್ಟುಹಬ್ಬಕ್ಕೆ ದರ್ಶನ್ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ದರ್ಶನ್ ಫ್ಯಾನ್ಸ್ ಕ್ಲಬ್ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಹಾಗೂ ವಿನೀಶ್ ಫೋಟೋ ಹಾಕಿ ವಿಭಿನ್ನವಾಗಿ ಶುಭಾಶಯ ತಿಳಿಸುತ್ತಿದ್ದಾರೆ.

ವಿನೀಶ್ ತನ್ನ ತಂದೆಯ ಹಾದಿಯಲ್ಲೇ ಸಾಗುತ್ತಿದ್ದಾನೆ. ದರ್ಶನ್ ಅವರಿಗೆ ಪ್ರಾಣಿಗಳೆಂದರೆ ತುಂಬಾ ಪ್ರೀತಿ. ಈಗಾಗಲೇ ಅವರು ಅನೇಕ ಪ್ರಾಣಿಗಳನ್ನು ದತ್ತು ಪಡೆದು ಸಾಕುತ್ತಿದ್ದು, ಅವರಿಗೆ ಕುದುರೆ ಅಂದರೆ ಇಷ್ಟ. ದರ್ಶನ್ ಸಾಕಿರುವ ಕುದುರೆ ಮೇಲೆ ಅನೇಕ ಬಾರಿ ಸವಾರಿಯನ್ನು ಮಾಡಿದ್ದಾರೆ. ತನ್ನ ತಂದೆಯಂತೆಯೇ ವಿನೀಶ್‍ಗೂ ಕೂಡ ಪ್ರಾಣಿಗಳ ಮೇಲೆ ತುಂಬಾ ಪ್ರೀತಿ. ಅವನು ಕೂಡ ಒಂದು ಕುದುರೆಯನ್ನು ಸಾಕಿ, ಅದರ ಮೇಲೆ ಸವಾರಿ ಮಾಡಿದ್ದ.

ದರ್ಶನ್ ಹಾಗೂ ವಿನೀಶ್ ‘ಐರಾವತ’ ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈಗ ‘ಯಜಮಾನ’ ಚಿತ್ರದ ಒಂದು ಹಾಡಿನಲ್ಲಿ ವಿನೀಶ್ ತಮ್ಮ ತಂದೆ ಜೊತೆ ಹೆಜ್ಜೆ ಹಾಕಿ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *