ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಸರಣಿ ಕಳ್ಳತನಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದೆ.
ಗುಂಡ್ಲುಪೇಟೆ ಪಟ್ಟಣ ಪೊಲೀಸ್ ಠಾಣೆಯ ಪೇದೆ ಕುಮಾರ್ ಅವರನ್ನು ಎಸ್‍ಪಿ ಆನಂದ್ ಕುಮಾರ್ ಅಮಾನತು ಮಾಡಿದ್ದಾರೆ. ಜೊತೆಗೆ ಕಾರಣ ಕೇಳಿ ಪಿಎಸ್‍ಐ ಲತೇಶ್ ಕುಮಾರ್ ಅವರಿಗೂ ನೋಟಿಸ್ ನೀಡಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಸರಣಿ ಕಳ್ಳತನ ನಡೆದಿರುವುದರ ಹಿಂದೆ ಪೊಲೀಸರ ಬೇಜವಾಬ್ದಾರಿಯೂ ಕಾರಣವಾಗಿದೆ. ಈ ಅಮಾನತು ಆದೇಶದಿಂದ ಇತರರಿಗೂ ಕಠಿಣ ಸಂದೇಶ ರವಾನೆಯಾಗುತ್ತದೆ ಎಂದು ಎಸ್ಪಿ ಆನಂದ್ ಕುಮಾರ್ ತಿಳಿಸಿದ್ದಾರೆ.