ಕುಡಿದು ಬೈಕ್ ಸವಾರನೇ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ: ಚಂದ್ರಪ್ರಭಾ

Public TV
1 Min Read

ಚಿಕ್ಕಮಗಳೂರಿನ ಹಿಟ್ & ರನ್ ಕೇಸ್ ಬಗ್ಗೆ ಕಾಮಿಡಿ ನಟ ಚಂದ್ರಪ್ರಭಾ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಶೂಟಿಂಗ್ ಮುಗಿಸಿಕೊಂಡು ಬರುತ್ತಿದ್ದೆ, ಕುಡಿದು ಬೈಕ್ ಸವಾರನೇ ನನ್ನ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ನಾನೇ ಅವರನ್ನು ಆಸ್ಪತ್ರೆಗೆ ದಾಖಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಗಿಚ್ಚಿ ಗಿಲಿ ಗಿಲಿʼ (Gichchi Gili Gili Winner) ವಿನ್ನರ್ ಚಂದ್ರಪ್ರಭಾ (Chandraprabha) ಅವರು ಹಿಟ್ & ರನ್ ಕೇಸ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಅಪಘಾತ ಮಾಡಿ ಮಾನವೀಯತೆಗೂ ಕಾರು ನಿಲ್ಲಿಸದೇ ನಟ ಪರಾರಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಈ ಅಪಘಾತ ಪ್ರಕರಣ ನಡೆದಿದ್ದು, ಬೈಕ್‌ನಲ್ಲಿದ್ದ ಯುವಕ ಮಾಲ್ತೇಶ್‌ಗೆ ಗುದ್ದಿ ನಟ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿತ್ತು.

ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಮಾಲ್ತೇಶ್‌ಗೆ ಏನಾಯಿತು ಎಂದು ನೋಡುವ ಸೌಜನ್ಯ ಕೂಡ ತೋರಿಲ್ಲ ಎಂದು ಹೇಳಲಾಗಿತ್ತು. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ:ಸೀರಿಯಲ್ ನಿರ್ದೇಶನದತ್ತ ‌’ಚಮಕ್‌’ ಡೈರೆಕ್ಟರ್ ಸಿಂಪಲ್ ಸುನಿ

ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್