ಚಂದ್ರಯಾನ- 3 ಸಕ್ಸಸ್: ಇಸ್ರೋಗೆ ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ

Public TV
2 Min Read

ಬೆಂಗಳೂರು: ಭಾರತ ಹೊಸ ಇತಿಹಾಸ ನಿರ್ಮಿಸಿದೆ. ಶಶಿಯ ರಹಸ್ಯ ಬೇಧಿಸಲು 40 ದಿನದ ಹಿಂದೆ ನಭಕ್ಕೆ ಚಿಮ್ಮಿದ್ದ ಭಾರತದ ಚಂದ್ರಯಾನ 3 ನೌಕೆ ಚಂದಿರನ ದಕ್ಷಿಣ ಧ್ರುವದಲ್ಲಿ ಇಳಿದು ಜೈ ಹಿಂದ್ ಎಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಸ್ರೋಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಚಂದ್ರಯಾನ-3 (Chandrayaan-3) ರ ವಿಕ್ರಂ ಲ್ಯಾಂಡರ್ (Vikram Lander) ಚಂದ್ರನ ಮೇಲೆ ಸುರಕ್ಷಿತವಾಗಿ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡೆ. ವಿಜ್ಞಾನಿಗಳ ದಶಕಗಳ ಪರಿಶ್ರಮವು ನನ್ನಂತ ಕೋಟ್ಯಂತರ ಭಾರತೀಯರ ಕನಸನ್ನು ನನಸಾಗಿಸಿದೆ. ಚಂದ್ರನ ಮೇಲೆ ಭಾರತದ ಪತಾಕೆ ಹಾರಿಸಿ ದೇಶವಾಸಿಗಳು ಹೆಮ್ಮೆಪಡುವಂತೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಡಿಕೆಶಿ ಅಭಿನಂದನೆ: ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: Chandrayaan-3: ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆ ಇಟ್ಟ ಮೊದಲ ದೇಶ ಭಾರತ

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ. ಆ ಮೂಲಕ ಚಂದ್ರಗ್ರಹದ ಮೇಲೆ ಭಾರತದ ಹೆಗ್ಗುರುತು ಮೂಡಿದೆ. ಇದಕ್ಕಾಗಿ ಅವಿರತ ಶ್ರಮಿಸಿದ ಇಸ್ರೋ ಸಂಸ್ಥೆಗೆ ಶುಭಾಶಯಗಳು. ಇಸ್ರೋ ಸಂಸ್ಥೆ ಈವರೆಗೂ ಮೂರು ಚಂದ್ರಯಾನ ಯೋಜನೆ ಯಶಸ್ವಿಗೊಳಿಸಿರುವುದು ದೊಡ್ಡ ಸಾಧನೆಯೇ ಸರಿ. ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ 3 ಯಶಸ್ವಿಯಾಗಿರುವುದು ಇಡೀ ದೇಶವೇ ಹೆಮ್ಮೆಪಡುವ ವಿಚಾರ. ಈ ಯೋಜನೆ ಯಶಸ್ಸಿನ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದೆ ಎಂದು ಶಿವಕುಮಾರ್ ಕೊಂಡಾಡಿದ್ದಾರೆ. ಇದನ್ನೂ ಓದಿ: ಸಾಫ್ಟ್ ಲ್ಯಾಂಡಿಂಗ್ ಸುಲಭ ಇರಲಿಲ್ಲ: ಇಸ್ರೋ ಅಧ್ಯಕ್ಷ

1960ರ ದಶಕದಲ್ಲೇ ದೇಶದ ರಾಕೆಟ್ ಮ್ಯಾನ್ ವಿಕ್ರಂ ಸಾರಾಭಾಯಿ, ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ದೂರದೃಷ್ಟಿ ಇಸ್ರೋ ಸಂಸ್ಥೆಗೆ ಬುನಾದಿ ಹಾಕಿತ್ತು. ಅಂದು ಅವರು ಬಿತ್ತಿದ ಬೀಜ ಇದು ವಿಶ್ವದಲ್ಲೇ ಬಾಹ್ಯಾಕಾಶ ಕ್ಷೇತ್ರದಲ್ಲಿ ದೊಡ್ಡ ಹೆಮ್ಮರವಾಗಿ ಬೆಳೆದಿದೆ” ಎಂದು ಶಿವಕುಮಾರ್ ಅವರು ತಮ್ಮ ಶುಭ ಸಂದೇಶದಲ್ಲಿ ತಿಳಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್