ಪಾಕ್ ಕ್ರಿಕೆಟಿಗರಿಗೆ ಜೈ ಶ್ರೀರಾಮ್‌ ಘೋಷಣೆ: ಉದಯನಿಧಿ ಆಕ್ಷೇಪ

Public TV
1 Min Read

ಚೆನ್ನೈ: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ವಿಶ್ವಕಪ್ ಕ್ರಿಕೆಟ್ (World Cup Cricket) ಪಂದ್ಯದ ವೇಳೆ ಪಾಕಿಸ್ತಾನದ (Pakistan) ಆಟಗಾರರಿಗೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವುದು ಸ್ವೀಕಾರಾರ್ಹವಲ್ಲ ಎಂದು ತಮಿಳುನಾಡು ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಸಚಿವ ಮತ್ತು ಡಿಎಂಕೆ (DMK) ಹಿರಿಯ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಹೇಳಿದ್ದಾರೆ.

ಪಾಕಿಸ್ತಾನದ ಆಟಗಾರರು ಪಂದ್ಯದಲ್ಲಿ ಔಟಾದಾಗ ಪ್ರೇಕ್ಷಕರು ಜೈ ಶ್ರೀ ರಾಮ್ (Jai Shri Ram) ಎಂದು ಘೋಷಣೆ ಕೂಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹೈವೋಲ್ಟೇಜ್ ಪಂದ್ಯದ ಬಳಿಕ ಪಾಕ್ ನಾಯಕನಿಗೆ ಜೆರ್ಸಿ ಗಿಫ್ಟ್ ಮಾಡಿದ ಕೊಹ್ಲಿ: ವಾಸಿಂ ಅಕ್ರಮ್ ಗರಂ

ಭಾರತವು (Team India) ತನ್ನ ಕ್ರೀಡಾ ಮನೋಭಾವ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಆದಾಗ್ಯೂ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಆಟಗಾರರಿಗೆ ಈ ರೀತಿಯ ಘೋಷಣೆ ಕೂಗಿದ್ದು ಸರಿಯಲ್ಲ. ಕ್ರೀಡೆಗಳು ದೇಶಗಳ ನಡುವೆ ಒಗ್ಗೂಡಿಸುವ ಶಕ್ತಿಯಾಗಬೇಕು. ನಿಜವಾದ ಸಹೋದರತ್ವವನ್ನು ಬೆಳೆಸಬೇಕು. ದ್ವೇಷವನ್ನು ಹರಡುವ ಸಾಧನವಾಗಿ ಬಳಸುವುದು ಸ್ವೀಕಾರಾರ್ಹವಲ್ಲ ಎಂದು ಬರೆದುಕೊಂಡಿದ್ದಾರೆ.

 

ಈ ಅಭಿಪ್ರಾಯಕ್ಕೆ ನೆಟ್ಟಿಗರೊಬ್ಬರು, ಐಪಿಎಲ್‌ನಲ್ಲಿ ಲಂಕಾ ಆಟಗಾರರಿಗೆ ತಮಿಳುನಾಡಿನಲ್ಲಿ ಆಡಲು ಬಿಡದ ವ್ಯಕ್ತಿಗಳಿಂದ ಈ ಮಾತು ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

 


Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್