ಕೋಲ್ಕತ್ತಾದ ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ – ಚೇರ್‌, ಬಾಟಲ್‌ ಎಸೆದು ಅಕ್ರೋಶ

1 Min Read

– ಕೇವಲ 10 ನಿಮಿಷದಲ್ಲಿ ನಿರ್ಗಮಿಸಿದ್ದಕ್ಕೆ ಆಕ್ರೋಶ

ಕೋಲ್ಕತ್ತಾ: ಅರ್ಜೆಂಟೀನಾದ ಫುಟ್‌ಬಾಲ್‌ ದಂತಕಥೆ ಲಿಯೋನೆಲ್ ಮೆಸ್ಸಿ (Lionel Messi) ಕಾರ್ಯಕ್ರಮವನ್ನು ಸರಿಯಾಗಿ ಆಯೋಜನೆ ಮಾಡದ್ದಕ್ಕೆ ಸಿಟ್ಟಾದ ಫುಟ್‌ಬಾಲ್‌ ಅಭಿಮಾನಿಗಳು (Football Fans) ಮೈದಾನಕ್ಕೆ ಇಳಿದು ದಾಂಧಲೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಮೆಸ್ಸಿ G.O.A.T. ಟೂರ್‌ ಭಾಗವಾಗಿ ಇಂದು ಕೋಲ್ಕತ್ತಾದ ಸಾಲ್ಟ್‌ ಲೇಕ್‌ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮದ ವೀಕ್ಷಣೆಗೆ 5,000 ರೂ. ನಿಂದ ಹಿಡಿದು 25,00 ರೂ. ಟಿಕೆಟ್‌ ದರ ನಿಗದಿಯಾಗಿತ್ತು.

ಟಿಕೆಟ್‌ ಬೆಲೆ ದುಬಾರಿಯಾಗಿದ್ದರೂ ಮೆಸ್ಸಿ ನೋಡಲೆಂದು ಅಭಿಮಾನಿಗಳು ಸ್ಟೇಡಿಯಂಗೆ ಆಗಮಿಸಿದ್ದರು. ಆದರೆ ಕಾರ್ಯಕ್ರಮ ಕೇವಲ 10 ನಿಮಿಷದಲ್ಲಿ ಕೊನೆಗೊಂಡಿತು. ಇದಕ್ಕೆ ಸಿಟ್ಟಾದ ಅಭಿಮಾನಿಗಳು ಚೇರ್‌ಗಳನ್ನು ಕಿತ್ತೆಸೆದಿದ್ದಾರೆ. ನೀರಿನ ಬಾಟಲಿಗಳನ್ನು ಮೈದಾನಕ್ಕೆ ಎಸೆದು ಆಕ್ರೋಶ ಹೊರಹಾಕಿದ್ದಾರೆ.

ನಿಗದಿ ಪ್ರಕಾರ ಮೆಸ್ಸಿ ಮೈದಾನದ ಸುತ್ತಲೂ ಒಂದು ಸುತ್ತು ಪ್ರದಕ್ಷಿಣೆ ಬರಬೇಕಿತ್ತು. ಆದರೆ ಕಾರ್ಯಕ್ರಮದಲ್ಲಿನ ಅವ್ಯವಸ್ಥೆಯಿಂದ 10 ನಿಮಿಷದಲ್ಲೇ ಮೈದಾನ ತೊರೆದರು. ಮೈದಾನ ತೊರೆದ ಬೆನ್ನಲ್ಲೇ ಸಿಟ್ಟಾದ ಅಭಿಮಾನಿಗಳು ನಾವು ಮೆಸ್ಸಿಯ ಮುಖವನ್ನು ನೋಡಿಲ್ಲ. 10 ನಿಮಿಷದ ಕಾರ್ಯಕ್ರಮಕ್ಕೆ ದುಬಾರಿ ಬೆಲೆ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್ ಫೋಗಟ್ – 2028ರ ಒಲಿಂಪಿಕ್ಸ್‌ನಲ್ಲಿ ಅಖಾಡಕ್ಕಿಳಿಯುವುದಾಗಿ ಘೋಷಣೆ

ಮಸ್ಸಿ ನಾವು ನೋಡಲೇ ಇಲ್ಲ. ಕೇವಲ ರಾಜಕಾರಣಿಗಳು ಮಾತ್ರ ಮೆಸ್ಸಿ ಜೊತೆ ಫೋಟೋ, ಹ್ಯಾಂಡ್‌ ಶೇಕ್‌ ಮಾಡಿದ್ದಾರೆ. ಬಹಳ ಕೆಟ್ಟದ್ದಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಎಂದಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿ ಅವರು ಈ ದುರದೃಷ್ಟಕರ ಘಟನೆಗೆ ಲಿಯೋನೆಲ್ ಮೆಸ್ಸಿ ಮತ್ತು ಎಲ್ಲಾ ಕ್ರೀಡಾ ಪ್ರೇಮಿಗಳು ಮತ್ತು ಅವರ ಅಭಿಮಾನಿಗಳಿಗೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಆಶಿಮ್ ಕುಮಾರ್ ರೇ ಅವರ ಅಧ್ಯಕ್ಷತೆಯಲ್ಲಿ ಮುಖ್ಯ ಕಾರ್ಯದರ್ಶಿ ಮತ್ತು ಗೃಹ ಮತ್ತು ಬೆಟ್ಟ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸದಸ್ಯರಾಗಿರುವ ತನಿಖಾ ಸಮಿತಿಯನ್ನು ರಚಿಸುತ್ತಿದ್ದೇನೆ. ಸಮಿತಿಯು ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುತ್ತದೆ ಎಂದು ಮಮತಾ ಬರೆದುಕೊಂಡಿದ್ದಾರೆ.

Share This Article