ಸಾವರ್ಕರ್ ಮಾತ್ರವಲ್ಲ, ಗಾಂಧಿ ಫೋಟೋವನ್ನು ತೆಗೆಯಬೇಕು: ಚೇತನ್

By
1 Min Read

ಸ್ಯಾಂಡಲ್‌ವುಡ್ (Sandalwood) ನಟ ಚೇತನ್ ಅಹಿಂಸಾ (Chethan Ahimsa) ವಿವಾದಾತ್ಮಕ ಹೇಳಿಕೆ ಮೂಲಕ ಸದ್ದು ಮಾಡುತ್ತಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ವಿ.ಡಿ ಸಾವರ್ಕರ್ ಜೊತೆಗೆ ಮಹಾತ್ಮಾ ಗಾಂಧೀಜಿ ಫೋಟೋ ಕೂಡ ತೆರವು ಮಾಡಬೇಕು ಎಂದು ಹೇಳಿಕೆ ನೀಡುವ ಮೂಲಕ ಚೇತನ್ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ (Priyanka Karge) ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ನಟ ಚೇತನ್, ಸಾವರ್ಕರ್ ಮತ್ತು ಗಾಂಧೀಜಿ ಇಬ್ಬರ ಫೋಟೋ ತೆಗೆಯಬೇಕು ಎಂದು ಹೇಳಿದ್ದರು. ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆದರೆ ಸೂಕ್ತ. ಅದನ್ನು ನನಗೆ ಬಿಟ್ಟರೆ ಇವತ್ತೇ ತೆಗೆಯುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಖರ್ಗೆಯವರಿಗೆ ಸಾವರ್ಕರ್ ಸೈದ್ಧಾಂತಿಕ ಶತ್ರುವಾಗಿರಬಹುದು. ನಮ್ಮಂತ ಸಮಾನತಾವಾದಿಗಳಿಗೆ, ಸಾವರ್ಕರ್ ಮತ್ತು ಗಾಂಧಿ ಇಬ್ಬರೂ ನಮ್ಮ ಸೈದ್ಧಾಂತಿಕ ಶತ್ರುಗಳು ಎಂದು ಚೇತನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಅಕ್ಕತಂಗಿಯರ ನಡುವಿನ ವಿಭಿನ್ನ ಕಥೆ ‘ಗಂಗೆ ಗೌರಿ’

ನೀವು ಸಾವರ್ಕರ್ ಮತ್ತು ಗಾಂಧಿ ಇಬ್ಬರ ಫೋಟೋಗಳನ್ನು ತೆಗೆದುಹಾಕುವುದು ಸೂಕ್ತ ಎಂದು ಚೇತನ್ ಪ್ರತಿಕ್ರಿಯಿಸಿದ್ದಾರೆ. ಇಲ್ಲವಾದರೆ, ಇಬ್ಬರನ್ನೂ ಇಟ್ಟುಕೊಳ್ಳಿ ಮತ್ತು ಸುವರ್ಣ ಸೌಧದಲ್ಲಿ ಕನ್ನಡಿಗ ತಂದೆ ಪೆರಿಯಾರ್ ಅವರ ಭಾವಚಿತ್ರವನ್ನು ಸೇರಿಸಿ ಎಂದು ಚೇತನ್ ಹೇಳಿದ್ದಾರೆ. ನಟ ಚೇತನ್ ಹೇಳಿಕೆ ಮತ್ತೊಂದು ವಿವಾದ ಹಾಗೂ ಚರ್ಚಗೆ ಗ್ರಾಸವಾಗಿದೆ.

Share This Article