‘ಶಕ್ತಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Public TV
1 Min Read

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಉದ್ಘಾಟಿಸಿದ್ದಾರೆ.

ವಿಧಾನಸೌಧ (Vidhanasoudha) ದಲ್ಲಿ ನಾಡಗೀತೆಯೊಂದಿಗೆ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸಿಎಸ್ ವಂದಿತಾ ಶರ್ಮಾ ಅವರಿಗೆ ಮೊದಲ ಶೂನ್ಯ ಟಿಕೆಟ್ ನೀಡಿ ಉಚಿತ ಪ್ರಯಾಣ (Free Bus Ticket For Women) ಕ್ಕೆ ಚಾಲನೆಯನ್ನು ಸಿಎಂ ನೀಡಿದರು. ಇದನ್ನೂ ಓದಿ: ನಮ್ಗೆ ಫ್ರೀ ಟಿಕೆಟ್ ಬೇಡ್ವೇಬೇಡ, ದಯವಿಟ್ಟು ಎಣ್ಣೆ ರೇಟು ಇಳಿಸಿ: ಯುವಕ ಮನವಿ

ಡಿಸಿಎಂ ಡಿಕೆಶಿವಕುಮಾರ್ (DK Shivakumar), ಸಚಿವ ಮಧು ಬಂಗಾರಪ್ಪ, ಸಚಿವ ಕೆಜೆ ಜಾರ್ಜ್, ಎಂಎಲ್‍ಸಿ ಹರಿಪ್ರಸಾದ್, ನಾಗರಾಜ್ ಯಾದವ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದ್ ರಾಜು, ಅಧಿಕಾರಿಗಳಾದ ರಾಖೇಶ್ ಸಿಂಗ್, ರಜನೀಶ್ ಗೊಯಲ್, ಬಿಎಂಟಿಸಿ ಎಂಡಿ ಸತ್ಯವತಿ, ಅನ್ಬು ಕುಮಾರ್ ಮೊದಲಾದ ಗಣ್ಯರು ವೇದಿಕೆ ಮೇಲೆ ಉಪಸ್ಥಿತರಿದ್ದರು.

ಇಂದು (ಭಾನುವಾರ) ಮಧ್ಯಾಹ್ನ 1 ಗಂಟೆಯ ನಂತರ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಸಿಗಲಿದೆ. 18,609 ಬಸ್‍ಗಳು ಉಚಿತ ಪ್ರಯಾಣಕ್ಕೆ ಲಭ್ಯ ಇವೆ. 41.80 ಲಕ್ಷ ಮಹಿಳೆಯರು ಈ ಸೌಲಭ್ಯದ ಫಲಾನುಭವಿಗಳು ಎಂದು ಅಂದಾಜಿಸಲಾಗಿದೆ.

Share This Article