ಶಿವಣ್ಣ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ನಟ ಶಿವರಾಜ್ ಕುಮಾರ್ (ShivarajKumar) ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ (Health) ವಿಚಾರಿಸಿದರು.

ಬಾಗಿಲ ಬಳಿ ಬಂದು ಸಿಎಂ ಅವರನ್ನು ಬರ ಮಾಡಿಕೊಂಡ ಶಿವರಾಜ್ ಕುಮಾರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ ಎಂದು ತಿಳಿಸಿದರು.

ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಬೈರತಿ ಸುರೇಶ್ ಅವರು ಸಿಎಂ ಜೊತೆ ಆಗಮಿಸಿ ಶಿವರಾಜ್‌ ಕುಮಾರ್‌ ಅವರ ಆರೋಗ್ಯ ವಿಚಾರಿಸಿದರು.

ಮೂತ್ರಕೋಶದ ಕ್ಯಾನ್ಸರ್ ಸಂಬಂಧ ಆಪರೇಷನ್ ಮಾಡಿಸಿಕೊಳ್ಳಲು ನಟ ಶಿವರಾಜಕುಮಾರ್ ಡಿ.18 ರಂದು ಅಮೆರಿಕಕ್ಕೆ ತೆರಳಿದ್ದರು. ಬಳಿಕ ಡಿ.24 ರಂದು ಆಪರೇಷನ್‌ಗೆ ಒಳಗಾಗಿದ್ದು, ಇದೀಗ ಸಂಪೂರ್ಣ ಗುಣಮುಖರಾಗಿ ಭಾನುವಾರ ಬೆಂಗಳೂರಿಗೆ ಮರಳಿದ್ದರು.

 

Share This Article