ಹೊಸ ವರ್ಷಾಚರಣೆ ಜೋಶ್‍ನಲ್ಲಿ ಅಡ್ಡಾದಿಡ್ಡಿ ಚಾಲನೆ- 4 ಕಾರುಗಳು ಜಖಂ

Public TV
1 Min Read

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ ಜೋಶ್‍ನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ 4 ಕಾರುಗಳ ಸರಣಿ ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿ ನಡೆದಿದೆ.

ಬಿಬಿ ರಸ್ತೆಯ ಸುಜುಕಿ ಶೋ ರೋ ಶ್ರೇಯಸ್ ಡಾಬಾ ಬಳಿ ಸ್ಕಾರ್ಪಿಯೋ ಹಾಗೂ ಎಟಿಯೋಸ್ ಕಾರು ಡಿಕ್ಕಿ ಹೊಡೆದಿವೆ. ಈ ವೇಳೆ ಹಿಂಬರುತ್ತಿದ್ದ ಬಂದ ಇಂಡಿಕಾ ಹಾಗೂ ರೆನಾಲ್ಟ್ ಕ್ವಿಡ್ ಸೇರಿ 4 ಕಾರುಗಳು ಅಪಘಾತಕ್ಕೀಡಾಗಿವೆ. ಅಪಘಾತದಿಂದ 4 ಕಾರುಗಳ ಜಖಂಗೊಂಡಿದ್ದು ಅಪಘಾತದಲ್ಲಿ ಕಾರುಗಳಲ್ಲಿದ್ದ ಕೆಲವರು ಗಾಯಗೊಂಡಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದಿಂದ ಸಂಚಾರ ಅಸ್ತವ್ಯಸ್ತಗೊಂಡು ಕೆಲಕಾಲ ವಾಹನ ಸವಾರರು ಪರದಾಡುವಂತಾಗಿತ್ತು. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಬಂದ ಸಿಪಿಐ ಸುದರ್ಶನ್ ಟ್ರಾಫಿಕ್ ನಿಯಂತ್ರಣ ಮಾಡಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *