ಚಿಕ್ಕಬಳ್ಳಾಪುರ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ (Bike Accident) ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪ ಗ್ರಾಮದ ಬಳಿ ನಡೆದಿದೆ.
ಶನಿವಾರ ಘಟನೆ ನಡೆದಿದೆ. ಹೊನ್ನಪ್ಪನಹಳ್ಳಿ ಗ್ರಾಮದ ಒಬಳೇಷ್ (45) ಹಾಗೂ ಮಂಚೇನಹಳ್ಳಿಯ ಮೆಕ್ಯಾನಿಕ್ ಅಜ್ಗರ್ (35) ಮೃತರು. ಇದನ್ನೂ ಓದಿ: ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ – ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ
ಅಂದಹಾಗೆ ಎರಡು ಸ್ಪ್ಲೆಂಡರ್ ಬೈಕ್ ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಸಹ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: 162 ಬಾರಿ ಫಾರಿನ್ ಟ್ರಿಪ್, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು
ಇನ್ನೂ ಒಂದು ಬೈಕ್‌ನಲ್ಲಿದ್ದ ಇಬ್ಬರು ಹಿಂಬದಿ ಸವಾರರು ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳಲ್ಲಿ ಒರ್ವನ ಸ್ಥಿತಿ ಗಂಭೀರ ಅಂತ ತಿಳಿದುಬಂದಿದೆ.