ಕಾಂಗ್ರೆಸ್ ಮುಖಂಡನಿಂದ ಮಹಿಳಾ ಅಧಿಕಾರಿಗೆ ಧಮ್ಕಿ- ಕ್ರಮಕ್ಕೆ ಜೆಡಿಎಸ್ ಒತ್ತಾಯ

1 Min Read

ಬೆಂಗಳೂರು: ಶಿಡ್ಲಘಟ್ಟದಲ್ಲಿ (Sidlaghatta) ನಗರಸಭೆ ಪೌರಾಯುಕ್ತೆಗೆ (Municipal Commissioner) ಕಾಂಗ್ರೆಸ್ ಮುಖಂಡನಿಂದ (Congress Leader) ಅವಾಜ್ ಹಾಕಿರೋ ಪ್ರಕರಣದಲ್ಲಿ ಕೂಡಲೇ ಆರೋಪಿಯನ್ನ ಬಂಧಿಸಬೇಕು ಅಂತ ಜೆಡಿಎಸ್ ಸರ್ಕಾರವನ್ನು ಆಗ್ರಹ ಮಾಡಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರೋ ಜೆಡಿಎಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಜೆಡಿಎಸ್ ಎಕ್ಸ್‌ನಲ್ಲಿ ಏನಿದೆ?
ಕರ್ನಾಟಕ ಕಾಂಗ್ರೆಸ್ ದುರಾಡಳಿತದಲ್ಲಿ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ಸಿನಿಮಾದ ಫ್ಲೆಕ್ಸ್ಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಶಿಡ್ಲಘಟ್ಟದ ಕೋಟೆ ಸರ್ಕಲ್ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ನಕಲಿ ರಾಮನ ಭಕ್ತರು, ನಾವು ನಿಜವಾದ ಭಕ್ತರು: ರಾಮಲಿಂಗಾರೆಡ್ಡಿ

ಇದಕ್ಕೆ ಕಾಂಗ್ರೆಸ್ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್ ತೆಗೆಸಿದವರನ್ನು ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ. ಇದನ್ನೂ ಓದಿ: ರಾಜ್ಯದ ಸಮಸ್ಯೆಗಳ ಬಗ್ಗೆ ಸಂಸತ್‌ನಲ್ಲಿ ಚರ್ಚೆ ಮಾಡಲು ಸಿಎಂ-ಡಿಸಿಎಂ ಜತೆ ರಾಹುಲ್ ಚರ್ಚೆ; ಶರಣು ಪ್ರಕಾಶ್ ಪಾಟೀಲ್

ಸಿಎಂ ಸಿದ್ದರಾಮಯ್ಯ ಗೃಹ ಸಚಿವರ ಪರಮೇಶ್ವರ ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಗೂಂಡಾ ರಾಜೀವ್ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ, ಕೆಪಿಸಿಸಿ ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ ಅಂತ ಆಗ್ರಹ ಮಾಡಿದೆ. ಇದನ್ನೂ ಓದಿ: ಸಿಎಂ-ಡಿಸಿಎಂರನ್ನ ಮಾತುಕತೆಗೆ ರಾಹುಲ್ ಗಾಂಧಿ ದೆಹಲಿಗೆ ಕರೆದಿದ್ದಾರೆ: ಅಶೋಕ್ ಪಟ್ಟಣ್

Share This Article