ದಲಿತರು ದೇವಸ್ಥಾನದ ಕಾಂಪೌಂಡ್ ಪ್ರವೇಶ – ದೇಗುಲಕ್ಕೆ ಬೀಗ, ಎರಡೂವರೆ ಲಕ್ಷ ದಂಡ

Public TV
1 Min Read

ಚಿಕ್ಕಮಗಳೂರು: ದಲಿತರು ದೇವಸ್ಥಾನದ ಕಾಂಪೌಂಡ್ ಒಳಗೆ ಹೋದರು ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಬೀಗ ಹಾಕಿ ದಲಿತರಿಗೆ ದಂಡ ಹಾಕಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಎರಡು ದಿನದ ಹಿಂದೆ ಬಿ.ಕೋಡಿಹಳ್ಳಿ ಗ್ರಾಮದ ಮಂಜಪ್ಪ ಹಾಗೂ ಮದನ್ ಎಂಬವರು ಗ್ರಾಮದ ಆಂಜನೇಯ ದೇವಸ್ಥಾನದ ಕಾಂಪೌಂಡ್ ಒಳಗೆ ಹೋಗಿದ್ದರು. ಅದಕ್ಕೆ ಗ್ರಾಮದ ಸವರ್ಣೀಯರು ಆ ಇಬ್ಬರಿಗೂ ದಂಡ ಹಾಕಿ ದೇವಸ್ಥಾನಕ್ಕೆ ಬೀಗ ಹಾಕಿದ್ದಾರೆ. ಇದನ್ನೂ ಓದಿ: ಹೆಬ್ಬಾಳ್ಕರ್‌ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದ ಬಳಸಿ ನಿಂದಿಸಿದ್ರಾ?

ಎರಡು ದಿನದಿಂದ ಆಂಜನೇಯನಿಗೆ ಪೂಜೆ ಕೂಡ ನಿಂತಿದೆ. ಮಂಜಪ್ಪ ಹಾಗೂ ಮದನ್ ಎಂಬ ಇಬ್ಬರಿಗೂ ಗ್ರಾಮಸ್ಥರು ದಂಡ ಹಾಕಿದ್ದಾರೆ. ದೇವಸ್ಥಾನದ ಪೂಜೆ ನಡೆಯಬೇಕು ಅಂದರೆ ಎರಡೂವರೆ ಲಕ್ಷ ಹಣ ನೀಡಬೇಕು ಎಂದು ಹೇಳಿದ್ದಾರೆ. ದೇವಸ್ಥಾನದ ಗರ್ಭಗುಡಿ ಹಾಗೂ ಕಾಂಪೌಂಡ್ ಶುದ್ಧೀಕರಣಕ್ಕಾಗಿ ಎರಡೂವರೆ ಲಕ್ಷ ಹಣ ನೀಡಿದ್ರೆ ದೇವಸ್ಥಾನದಲ್ಲಿ ಮತ್ತೆ ಪೂಜೆ ನಡೆಯಲಿದೆ ಎಂದು ಆಗ್ರಹಿಸಿದ್ದಾರೆ.

ದೇವಸ್ಥಾನಕ್ಕೆ ಎರಡೂವರೆ ಲಕ್ಷ ಹಣ ನೀಡಿ ನೀವು ಕಾಂಪೌಂಡ್‌ನಿಂದ ಹೊರಗೆ ನಿಂತು ಪೂಜೆ ಮಾಡಿಸಿಕೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ. ಈ ಬಗ್ಗೆ ದೇವಸ್ಥಾನದ ಕಾಂಪೌಂಡ್ ಒಳ ಹೋಗಿದ್ದಕ್ಕೆ ಗ್ರಾಮಸ್ಥರು ದೇವಸ್ಥಾನಕ್ಕೆ ಬೀಗ ಹಾಕಿ, ದಂಡ ಹಾಕಿದ್ದಾರೆ ಎಂದು ಆರೋಪಿಸಿ ಮಂಜಪ್ಪ ತಹಸೀಲ್ದಾರ್‌ಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ನೆಲೆಸಿದ್ದ 24 ಮಂದಿ ಪಾಕ್‌, 159 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ – ಸರ್ಕಾರ ಅಂಕಿ-ಅಂಶ ಬಿಡುಗಡೆ

Share This Article