ಅರ್ಕೆಸ್ಟ್ರಾ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ – ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ

Public TV
1 Min Read

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನಿಗೆ ಚಾಕು ಇರಿದು ಹತ್ಯೆ ಮಾಡಿದ ಪ್ರಕರಣ ತರಿಕೆರೆಯಲ್ಲಿ (Tarikere) ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ವರುಣ್ (28) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಕಬಾಬ್ ಮೂರ್ತಿ ಎಂದು ಗುರುತಿಸಲಾಗಿದೆ. ಅಲ್ಲದೇ ಆರೋಪಿ ಮತ್ತಿಬ್ಬರ ಮೇಲೂ ಹಲ್ಲೆ ನಡೆಸಿದ್ದು ಗಾಯಗಳಾಗಿವೆ. ಇದನ್ನೂ ಓದಿ: ದೇವರ ದಯೆಯಿಂದ ನಾವು ಕೋರಮಂಡಲ್ ಎಕ್ಸ್‌ಪ್ರೆಸ್ ಹತ್ತಲಿಲ್ಲ – ಬೆಂಗಳೂರಿಗೆ ಬಂದಿಳಿದ ವಾಲಿಬಾಲ್ ಕೋಚ್ ಪ್ರತಿಕ್ರಿಯೆ

ನೂತನ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಅವರ ಅಭಿನಂದನಾ ಸಮಾರಂಭದಲ್ಲಿ ಆರ್ಕೆಸ್ಟ್ರಾದಲ್ಲಿ (Arkestra) ಹಾಡು ಬದಲಿಸುವ ವಿಚಾರದಲ್ಲಿ ವರುಣ್ ಹಾಗೂ ಕಾಬಾಬ್ ಮೂರ್ತಿ ನಡುವೆ ಗಲಾಟೆ ನಡೆದಿದೆ. ಇದರಿಂದ ಸಿಟ್ಟಿಗೆದ್ದ ಆರೋಪಿ ಕಾರ್ಯಕ್ರಮ ಮುಗಿಯುವ ತನಕ ಸುಮ್ಮನಿದ್ದ. ಬಳಿಕ ಕಾರ್ಯಕ್ರಮ ಮುಗಿಯುತ್ತಿದ್ದಂತೆ ವರುಣ್‍ಗೆ ಚಾಕುವಿನಿಂದ ಇರಿದಿದ್ದಾನೆ. ಅಲ್ಲದೆ ಮಂಜು ಹಾಗೂ ಸಂಜು ಎಂಬುವವರಿಗೂ ಆರೋಪಿ ಚಾಕುವಿನಿಂದ ಇರಿದಿದ್ದು, ಇಬ್ಬರಿಗೂ ಗಾಯಗಳಾಗಿವೆ.

ಕೂಡಲೇ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯದಲ್ಲೇ ವರುಣ್ ಮೃತಪಟ್ಟಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್‍ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ನಾವು ಸೇಫ್ ಆಗಿದ್ದೇವೆ; ಸುರಕ್ಷಿತವಾಗಿ ಸುಮೇದ್ ಸಿಖರ್ಜಿ ತಲುಪಿದ 110 ಕನ್ನಡಿಗರು

Share This Article