ಚಿಕ್ಕಮಗಳೂರು | ವಿದ್ಯುತ್ ಶಾಕ್‍ಗೆ ನವವಿವಾಹಿತ ಲೈನ್‍ಮೆನ್ ಬಲಿ

By
1 Min Read

ಚಿಕ್ಕಮಗಳೂರು: ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಲೈನ್‍ಮೆನ್ ವಿದ್ಯುತ್ ಶಾಕ್‍ನಿಂದ (Electric Shock) ಸಾವನ್ನಪ್ಪಿದ ಘಟನೆ ಎನ್.ಆರ್.ಪುರ (NRPura) ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಪ್ರವೀಣ್ (26) ಎಂದು ಗುರುತಿಸಲಾಗಿದೆ. ಮೂಲತಃ ಬಾಗಲಕೋಟೆಯ (Bagalkote) ಪ್ರವೀಣ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೆಸ್ಕಾಂ ಕಚೇರಿಯಲ್ಲಿ ಲೈನ್‍ಮೆನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು (ಜು.18) ಹೊನ್ನೆಕೊಪ್ಪ ಗ್ರಾಮದಲ್ಲಿ ಕಂಬ ಹತ್ತಿ ಫ್ಯೂಸ್ ಹಾಕಿ ವಿದ್ಯುತ್ ಲೈನ್ ದುರಸ್ಥಿ ಮಾಡುವ ವೇಳೆ ವಿದ್ಯುತ್ ಶಾಕ್ ನಿಂದ ತೀವ್ರ ಅಸ್ವಸ್ತಗೊಂಡಿದ್ದರು. ಕಂಬದಿಂದ ಬಿದ್ದು ಅಸ್ವಸ್ಥನಾಗಿ ಒದ್ದಾಡುತ್ತಿದ್ದ ಅವರನ್ನು ಸ್ಥಳಿಯರು ಹಾಗೂ ಇತರೇ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಇದನ್ನೂ ಓದಿ: ದೆಹಲಿಯ 50, ಬೆಂಗ್ಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

ಆಸ್ಪತ್ರೆಗೆ ಬರುವ ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಂಡಕ್ಟರ್ ಯಡವಟ್ಟು, ಹೋಟೆಲ್‍ಗೆ ನುಗ್ಗಿದ ಬಿಎಂಟಿಸಿ ಬಸ್ – ಐವರಿಗೆ ಗಾಯ

Share This Article