ಸಾವಿನಲ್ಲೂ ಸಾರ್ಥಕತೆ ಮೆರೆದ ಕಾಫಿನಾಡಿನ ಸಹನಾ ಮೊಸೆಸ್- ನಾಲ್ವರಿಗೆ ಪುನರ್ಜನ್ಮ

Public TV
2 Min Read

ಚಿಕ್ಕಮಗಳೂರು: ಕಾಫಿನಾಡ ಜಿಲ್ಲಾಸ್ಪತ್ರೆ ಮತ್ತೊಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ. ಒಂಬತ್ತು ತಿಂಗಳ ಹಿಂದಷ್ಟೆ ಯುವತಿ ರಕ್ಷಿತಾಬಾಯಿಯ ಯಶಸ್ವಿ ಅಂಗಾಂಗ ರವಾನೆ ಮಾಡಿದ್ದ ಜಿಲ್ಲಾಸ್ಪತ್ರೆ ಇದೀಗ ಮತ್ತೊಂದು ಅಂತಹದ್ದೆ ಪ್ರಕರಣದಲ್ಲಿ ಅಂಗಾಂಗ ದಾನ ಮಾಡಿ ಸೈ ಎನ್ನಿಸಿಕೊಂಡಿದೆ.

ಬ್ರೈನ್ ಟ್ಯೂಮರ್ (Brain Tumor) ಖಾಯಿಲೆಯಿಂದ ಮೆದುಳು ನಿಷ್ಕ್ರಿಯಗೊಂಡು ಕಳೆದ ಮೂರು ದಿನಗಳಿಂದ ಐಸಿಯುನಲ್ಲಿದ್ದ ಮಹಿಳೆಯೊಬ್ಬರ ಅಂಗಾಂಗಗಳ ದಾನಕ್ಕೆ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದೆ. ನಗರದ ಸಮಾಜ ಸೇವಕ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ರೂಬೆನ್ ಮೋಸೆಸ್ ಅವರ ಪತ್ನಿ ಸಹನಾ ರೂಬೆನ್ ಮೊಸೆಸ್ ಅವರು ಕಳೆದ ಶನಿವಾರ ತಮ್ಮ ಮನೆಯಲ್ಲಿದ್ದ ವೇಳೆ ದಿಢೀರ್ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನ ನಗರದ ಸ್ಪಂದನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.

ಸಹನಾ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದ ವೈದ್ಯರು ಬ್ರೈನ್ ಟ್ಯೂಮರ್ ಇರುವುದನ್ನು ಪತ್ತೆ ಮಾಡಿದ್ದರು. ಶಿವಮೊಗ್ಗದ (Shivamogga) ವೈದ್ಯರು ಮೆದುಳು ನಿಷ್ಕ್ರಿಯಗೊಂಡಿರುವುದನ್ನ ದೃಢಪಡಿಸಿದ ಹಿನ್ನೆಲೆಯಲ್ಲಿ ಸಹನಾ ರೂಬೆನ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಕಳೆದ 2 ದಿನಗಳಿಂದ ಐಸಿಯುನಲ್ಲಿ ದಾಖಲು ಮಾಡಲಾಗಿತ್ತು. ಸಹನಾ ಅವರ ಮೆದುಳು ಹೊರತುಪಡಿಸಿ ಉಳಿದೆಲ್ಲಾ ಅಂಗಾಂಗಗಳು ಸುಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹಿನ್ನೆಲೆ ಸಹನಾ ಪತಿ ರೂಬೆನ್ ಅವರು ಪತ್ನಿಯ ಬಯಕೆಯಂತೆ ಬಹು ಅಂಗಾಂಗಳ ದಾನಕ್ಕೆ ನಿರ್ಧರಿಸಿದ್ದರು. ಇದನ್ನು ತಮ್ಮ ಕುಟುಂಬಸ್ಥರೊಂದಿಗೆ ಚರ್ಚಿಸಿದ ಅವರು ಕುಟುಂಬಸ್ಥರ ಒಪ್ಪಿಗೆ ಬಳಿಕ ಬಹು ಅಂಗಾಂಗಗಳ ದಾನಕ್ಕೆ ಸಮ್ಮತಿ ನೀಡಿದ್ದರು.

ಮೆದುಳು ನಿಷ್ಕ್ರಿಯಗೊಂಡಿದ್ದ ಸಹನಾ ಅವರ ಅಂಗಾಂಗ ದಾನಕ್ಕೆ ಕುಟುಂಬದ ಸದಸ್ಯರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಮೋಹನ್ ಕುಮಾರ್ ಜೀವನ ಸಾರ್ಥಕತೆ ಸಂಸ್ಥೆಯೊಂದಿಗೆ ಚರ್ಚಿಸಿ ಶನಿವಾರ ಹಾಗೂ ಭಾನುವಾರ ಬಹು ಅಂಗಾಗಗಳನ್ನು ಬೇರ್ಪಡಿಸುವುದು ಹಾಗೂ ಅಂಗಾಂಗಗಳ ರವಾನೆಗೆ ಮರು ಜೋಡಣೆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದರು. ಸಹನಾ ಅವರ ಹೃದಯದ ರಕ್ತದ ಮಾದರಿ ಹೊಂದಿಕೆಯಾಗದ ಕಾರಣಕ್ಕೆ ಹೃದಯ ಹೊರತು ಪಡಿಸಿ ಕಣ್ಣು, ಕಿಡ್ನಿ, ಲಿವರ್ ಸೇರಿದಂತೆ ಐದು ಅಂಗಾಂಗಳ ದಾನಕ್ಕೆ ವೈದ್ಯರು ಸಿದ್ಧತೆ ಕೈಗೊಂಡಿದ್ದರು.

ಸೋಮವಾರ ಮಧ್ಯಾಹ್ನ ಜಿಲ್ಲಾ ಸರ್ಜನ್ ಡಾ.ಮೋಹನ್‍ಕುಮಾರ್ ನೇತೃತ್ವದಲ್ಲಿ 2 ತಜ್ಞ ವೈದ್ಯರ ತಂಡ ಸಹನಾ ರೂಬೆನ್ ಅವರ ಅಂಗಾಂಗ ದಾನದ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಕಣ್ಣು, ಕಿಡ್ನಿ, ಲಿವರ್ ಸೇರಿದಂತೆ ದೇಹದ 5 ಅಂಗಗಳನ್ನು ಬೇರ್ಪಡಿಸಿದ್ದು, ಮರು ಜೋಡಣೆಗಾಗಿ ಅಂಗಾಂಗಗಳನ್ನು ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಅಪೆÇಲೋ ಆಸ್ಪತ್ರೆ ಹಾಗೂ ಮಂಗಳೂರಿನ ಎಜೆ ಆಸ್ಪತ್ರೆಗೆ ರವಾನಿಸಲಾಯಿತು.

ಈ ವೇಳೆ ಪತ್ನಿ ನೆನೆದು ರೂಬೆನ್ ಕಣ್ಣೀರಿಟ್ಟರು. ನನ್ನ ಮಡದಿಯ ಅಂಗಾಂಗದಿಂದ ನಾಲ್ಕು ಜನರ ಪ್ರಾಣ ಉಳಿಯಲಿ, ಸಂತೋಷದಿಂದ ಅಂಗಾಂಗ ದಾನ ಮಾಡಿದ್ದೇವೆ ಎಂದರು. ಸಹನಾ ಮೊಸೆಸ್ ಪತಿಯಂತೆ ತಾನೂ ಕೂಡ ಸಮಾಜಸೇವಕಿಯಾಗಿದ್ದರು. ಕೊರೋನಾ ಕಾಲದಲ್ಲಿ 70ಕ್ಕೂ ಹೆಚ್ಚು ನಿರ್ಗತಿಕರಿಗೆ ಅನ್ನ ಬೇಯಿಸಿದ್ದರು. ಭಿಕ್ಷುಕರನ್ನ ಆತ್ಮೀಯತೆಯಿಂದ ತಬ್ಬಿ ಸಂತೈಸಿದ್ದ ಸಹೃದಯಿ ಮಾತೃ ಹೃದಯ ಅವಳದ್ದಾಗಿತ್ತು. ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸಿದ್ರು, ಮದುವೆ ಮಾಡಿಸಿ ಬದುಕು ಕಟ್ಟಿಕೊಟ್ಟಿದ್ದರು. ಆಕೆ ಮಾಡಿದ ಸೇವೆಗಳಿಗೆ ನಾನಾ ಸಂಸ್ಥೆಗಳು ಸೇವರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದವು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್