ದೇವಾಲಯದ ಆದಾಯ ಕಡಿಮೆ- ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್

Public TV
1 Min Read

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ (State Govt) ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು (Priest Salary) ವಾಪಸ್ ಕೇಳಿದೆ.

ಈ ಸಂಬಂಧ ಚಿಕ್ಕಮಗಳೂರಿನ (Chikkamagaluru) ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ.

ನೋಟಿಸ್‍ನಲ್ಲೇನಿದೆ..?: ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡುವಂತೆ ತಿಳಿಸಲಾಗಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಜಮೆಯಾಗುತ್ತಿತ್ತು. ಇದೀಗ 7,500 ರೂ. ಸಂಬಳದಲ್ಲಿ 4,500 ವಾಪಸ್ ನೀಡಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸಾರ್ವಜನಿಕರಿಗೆ ತೆರೆಯುತ್ತಿದ್ದಂತೆಯೇ ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!

ಕಣ್ಣನ್ ಅವರು ಕಳೆದ 50 ವರ್ಷಗಳಿಂದ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರತಿ ತಿಂಗಳು ಬರುತ್ತಿದ್ದ ಸಂಬಳವನ್ನು ಜಿಲ್ಲಾಡಳಿತ ತೆಡೆಹಿಡಿದಿದೆ. ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೀಡಿರುವ ನೋಟಿಸ್ ಕಂಡು ಕಣ್ಣನ್ ಅವರು ನೋಟಿಸ್ ನೋಡಿ ಆತಂಕಗೊಂಡಿದ್ದಾರೆ.

Share This Article