ನದಿಗೆ ಉರುಳಿದ ಮದುವೆ ಮನೆಗೆ ತೆರಳುತ್ತಿದ್ದ ಟ್ರಕ್- ಐವರ ದುರ್ಮರಣ

Public TV
1 Min Read

ಭೋಪಾಲ್: ಮದುವೆ (Marriage) ಮನೆಗೆ ಅತಿಥಿಗಳನ್ನು ಹೊತ್ತು ಸಾಗುತ್ತಿದ್ದ ಟ್ರಕ್ ಒಂದು ನದಿಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ದಾರುಣವಾಗಿ ಮೃತಪಟ್ಟ ಘಟನೆ ಮಧ್ರಪ್ರದೇಶ (Madhyapradesh Truck Overturned) ದ ದಾಟಿಯಾ ಜಿಲ್ಲೆಯಲ್ಲಿ ನಡೆದಿದೆ.

ಮೃತರೆಲ್ಲರೂ ಗ್ವಾಲಿಯರ್‍ನ ಬಿಲ್ಹೆಟಿ ಗ್ರಾಮದವರಾಗಿದ್ದು, ಇವರೆಲ್ಲರೂ ಟಿಕಮ್ಗರ್ ನಲ್ಲಿ ನಡೆಯುತ್ತಿದ್ದ ಮಗಳ ಮದುವೆಗೆ ತೆರಳುತ್ತಿದ್ದರು. ಘಟನೆಯಲ್ಲಿ ಸುಮರು 24 ಮಂದಿ ಗಾಯಗೊಂಡಿದ್ದು, ಹಲವು ಮಕ್ಕಳು ನಾಪತ್ತೆಯಾಗಿದ್ದಾರೆ ಎಂಬುದಾಗಿ ವರದಿಯಗಿದೆ. ಇದನ್ನೂ ಓದಿ: ಅಂತರ್ಜಾತಿ ಪ್ರೇಮ – ಮಗಳ ಕತ್ತು ಹಿಸುಕಿ ಕೊಂದ ತಂದೆ

ಈ ಸಂಬಂಧ ಮಧ್ಯಪ್ರದೇಶದ ಗೃಹಸಚಿವ ನರೋತ್ತಮ್ ಮಿಶ್ರಾ ಮಾತನಾಡಿ, ಬುಹಾರಾ ಗ್ರಾಮದಲ್ಲಿರುವ ನದಿಯ ಹತ್ತಿರ ಬರುತ್ತಿದ್ದಂತೆಯೇ ಟ್ರಕ್ ಚಕ್ರಗಳು ಜಾರಿ ನದಿಗೆ ಉರುಳಿದೆ. ಪರಿಣಾಮ 2 ಹಾಗೂ ಮೂರು ವರ್ಷದ ಮಕ್ಕಳು ಸೇರಿ 65 ವರ್ಷದ ಮಹಿಳೆ ಮತ್ತು 18 ವರ್ಷದ ಹುಡುಗನೊಬ್ಬ ಮೃತಪಟ್ಟಿದ್ದಾನೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

Share This Article
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌ ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ ಹಾಟ್‌ ಲುಕ್‌ ಬೆಡಗಿ ಸಾನ್ಯಾ ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..! ಹಾಟ್ ಅವತಾರದಲ್ಲಿ ಮಾನ್ವಿತಾ