ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

Public TV
2 Min Read

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stampede Case) ಸಂಬಂಧಿಸಿದಂತೆ ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

ಕೆಎಸ್‌ಸಿಎ ಕಾರ್ಯದರ್ಶಿ ಎ. ಶಂಕರ್‌, ಖಜಾಂಚಿ ಜೈರಾಮ್‌ ಶುಕ್ರವಾರ (ಜೂ.6) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್‌ ಅವರೇ ಪ್ರಕಟಣೆ ಹೊರಡಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು ಕಾಲ್ತುಳಿತ ಕೇಸ್‌ – ಕೊಹ್ಲಿ ವಿರುದ್ಧ ದೂರು ದಾಖಲು

ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರು, ತನಿಖೆಯನ್ನ ಸಿಐಡಿಗೆ ವಹಿಸಿರುವುದಾಗಿ ತಿಳಿಸಿದ್ದರು. ಅಲ್ಲದೇ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆ ಹಾಗೂ ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಸಿಎಂ ಸೂಚನೆ ಬೆನ್ನಲ್ಲೇ ಶುಕ್ರವಾರ ಕೆಎಸ್‌ಸಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಆರ್‌ಸಿಬಿ ಮ್ಯಾನೇಜ್‌ಮೆಂಟ್‌, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್ ‌ಹಾಗೂ ಕೆಎಸ್‌ಸಿಎ ನಿಂದ ಒಟ್ಟು 6 ಮಂದಿಯನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಕೆಎಸ್‌ಸಿಎನಲ್ಲಿ ಇಬ್ಬರು ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

Chinnaswamy Stampede

ಏನಿದು ಪ್ರಕರಣ?
ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು.

Share This Article