ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium Stampede) ಮುಂಭಾಗ ನಡೆದಿದ್ದ ಕಾಲ್ತುಳಿತ ಪ್ರಕರಣದ ತನಿಖೆಗೆ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ವರದಿ (Michael D’Cunha Report) ರದ್ದು ಕೋರಿ ಡಿಎನ್‌ಎ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ಜುಲೈ 11ರಂದು ವರದಿ ಸಲ್ಲಿಸಿತ್ತು. ವರದಿಯಲ್ಲಿರುವ ಅಂಶಗಳನ್ನ ವಿರೋಧಿಸಿ ವರದಿ ರದ್ದು ಕೋರಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ (DNA) ಅರ್ಜಿ ಸಲ್ಲಿಸಿತ್ತು.
ಅರ್ಜಿಯಲ್ಲಿ ಡಿಎನ್‌ಎದೇ ತಪ್ಪು ಎನ್ನುವಂತೆ ಉಲ್ಲೇಖಿಸಲಾಗಿದೆ. ತನಿಖೆ ಬಾಕಿಯಿದ್ದರೂ ವರದಿಯಲ್ಲಿ ಈ ರೀತಿ ಉಲ್ಲೇಖ ಎಂದು ಆಕ್ಷೇಪ ವ್ಯಕ್ತಪಡಿಸಿ, ವರದಿಯಲ್ಲಿರುವ ಹಲವು ಅಂಶಗಳನ್ನ ಆಕ್ಷೇಪಿಸಿ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾ. ಡಿಕೆ ಸಿಂಗ್ ಮತ್ತು ತಾರಾ ವಿತಾಸ್ತಾ ಗಂಜು ಅವರ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ನಿಲುವನ್ನು ಪರಿಗಣಿಸಿ, ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

