ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ – ದೂರು ದಾಖಲು

Public TV
1 Min Read

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೂ ( Bihar Assembly Elections) ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ (Chirag Paswan) ಅವರಿಗೆ  ಜೀವ ಬೆದರಿಕೆ (Death Threat) ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್ ಭಟ್ ತಿಳಿಸಿದ್ದಾರೆ.

ಜೀವ ಬೆದರಿಕೆ ಹಿನ್ನೆಲೆ ರಾಜೇಶ್ ಭಟ್ ಪಾಟ್ನಾದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‘ಟೈಗರ್ ಮೆರಾಜ್ ಇಡಿಸಿ’ ಎಂಬ ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ಮುಚ್ಚಿ ವಿಡಿಯೋ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್‌

ಪಾಸ್ವಾನ್ ಅವರ ಜನಪ್ರಿಯತೆ ಹೆಚ್ಚುತ್ತಿರುವ ಕಾರಣ ಈ ಬೆದರಿಕೆ ಹಾಕಲಾಗಿದೆ. ಈ ಕೃತ್ಯ ಕ್ರಿಮಿನಲ್ ಉದ್ದೇಶ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ. ವಿಷಯದ ಗಂಭೀರತೆಯನ್ನು ತಕ್ಷಣವೇ ಅರಿತುಕೊಂಡು ತ್ವರಿತ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ ಎಂದು ರಾಜೇಶ್ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Davanagere | ಗೋಲ್ಡ್ ಲೋನ್ ರಿನಿವಲ್ ಮಾಡಲು ಬಂದಿದ್ದ ಮಹಿಳೆಯ 3.5 ಲಕ್ಷ ಹಣ ಎಗರಿಸಿದ ಕಳ್ಳಿಯರು

ಈ ಕುರಿತು ಮಾತನಾಡಿದ ಸೈಬರ್ ಡಿಸಿಪಿ ನಿತೀಶ್ ಚಂದ್ರ ಧರಿಯಾ, ಜುಲೈ 11ರ ರಾತ್ರಿ 9 ಗಂಟೆ ಸುಮಾರಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಪಾಟ್ನಾ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ವಿದೇಶಗಳಲ್ಲಿ ಆಸ್ತಿ ಮಾಡಿದ್ರೆ ಸರ್ಕಾರಕ್ಕೆ ಬರೆದುಕೊಡುವೆ – ಇಡಿ ದಾಳಿಗೊಳಗಾಗಿದ್ದ ಶಾಸಕ ಸುಬ್ಬಾರೆಡ್ಡಿ ಸವಾಲ್‌

Share This Article