Chitradurga Bus Accident| PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ: ಮೋದಿ ಸಂತಾಪ

2 Min Read

ನವದೆಹಲಿ/ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PNRF) 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ ಮೋದಿ (PM Narendra Modi) ಹೇಳಿದ್ದಾರೆ.

ಈಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ (Chitradurga) ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.

ಸಿಎಂ ಸಂತಾಪ:
ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಟ್ರಕ್‌ ಗುದ್ದಿದ್ದರಿಂದ ದುರಂತ – ಸೀಬರ್ಡ್‌ ಮಾಲೀಕ

ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಹೇಳಿದ್ದಾರೆ.

ಡಿಕೆಶಿ ಸಂತಾಪ
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಪೋಸ್ಟ್‌ ಮಾಡಿದ್ದಾರೆ.

Share This Article