ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

1 Min Read

ಚಿತ್ರದುರ್ಗ: ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ (Student) ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಭರಮಸಾಗರದ (Bharamasagara) ಖಾಸಗಿ ಶಾಲೆಯಲ್ಲಿ ನಡೆದಿದೆ.

ಇಲ್ಲಿನ ವಸತಿ ಶಾಲೆಯ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದವನಾಗಿದ್ದು, ಈವರೆಗೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

ಕೊಟ್ರೇಶ್ 3ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಭರಮಸಾಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

Share This Article