ತುಳು ಚಿತ್ರರಂಗಕ್ಕೆ ಕಾಲಿಟ್ಟ ಹಿಂದಿ ನಟ ‘ಸಿಐಡಿ’ ದಯಾ

Public TV
1 Min Read

ಹಿಂದಿ ಕಿರುತೆರೆಯ ‘ಸಿಐಡಿ’ ಸೀರಿಯಲ್‌ನಲ್ಲಿ ಇನ್ಸ್‌ಪೆಕ್ಟರ್ ದಯಾ ಪಾತ್ರದ ಮಾಡಿದ್ದ ದಯಾನಂದ್ ಶೆಟ್ಟಿ ಇದೀಗ ತುಳು ಇಂಡಸ್ಟ್ರಿಗೆ ಕಾಲಿಟ್ಟಿದ್ದಾರೆ. ಹಿಂದಿ ಸೀರಿಯಲ್, ಸಿನಿಮಾಗಳ ಮೂಲಕ ಗಮನ ಸೆಳೆದ ನಟ ಈಗ ತುಳು ಚಿತ್ರರಂಗಕ್ಕ ಎಂಟ್ರಿ ಕೊಟ್ಟಿದ್ದಾರೆ.

‘ಯಾನ್ ಸೂಪರ್ ಸ್ಟಾರ್’ ಹೆಸರಿನ ಹೊಸ ತುಳು ಸಿನಿಮಾವು ರಿಲೀಸ್‌ಗೆ ಸಿದ್ಧವಾಗಿದೆ. ಸೆ.22ರಂದು ಈ ಸಿನಿಮಾವು ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ ಆಗುತ್ತಿದೆ. ವಿಶೇಷವೆಂದರೆ, ಹಿಂದಿಯ ‘ಸಿಐಡಿ’ ಧಾರಾವಾಹಿಯಲ್ಲಿ  ನಟ ದಯಾನಂದ್ ಶೆಟ್ಟಿ ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.

ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ ಈ ಸಿನಿಮಾವನ್ನು ಸಂತೋಷ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸ್ವತಃ ದಯಾನಂದ ಶೆಟ್ಟಿ ಅವರೇ ನಿರ್ಮಾಣ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ತಂದೆಯಾದ ‘ಬಿಗ್ ಬಾಸ್’ ಖ್ಯಾತಿಯ ರಾಹುಲ್ ವೈದ್ಯ

ಯಾನ್ ಸೂಪರ್ ಸ್ಟಾರ್ ಸಿನಿಮಾವು ಕುಟುಂಬ ಸಮೇತ ನೋಡುವ ಸಿನಿಮಾವಾಗಿದ್ದು, ಉಡುಪಿ ಸುತ್ತಮುತ್ತ 25 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಈ ಚಿತ್ರವನ್ನು ಸಂತೋಷ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಹಾಡೊಂದನ್ನು ಗುರುಕಿರಣ್ ಹಾಡಿದ್ದಾರೆ. ಮೂಲತಃ ಕರಾವಳಿ ಭಾಗದವರೇ ಆಗಿರುವ ದಯಾನಂದ್ ಶೆಟ್ಟಿ ಇದೀಗ ಮೊದಲ ಬಾರಿಗೆ ತುಳು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್