ಜು.1ರಿಂದ ಸ್ವಚ್ಛತಾ ಕಾರ್ಯ ಬಂದ್ – ಸಾರ್ವಜನಿಕರಿಗೆ ತೊಂದ್ರೆಯಾದ್ರೆ ಸರ್ಕಾರವೇ ಹೊಣೆ ಎಂದ ಪೌರಕಾರ್ಮಿಕರು

Public TV
1 Min Read

ಚಾಮರಾಜನಗರ: ನೇರ ಪಾವತಿ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಪೌರಕಾರ್ಮಿಕ ಮಹಾಸಂಘವು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಅಲ್ಲದೆ ಜುಲೈ 1 ರಿಂದ ಸ್ವಚ್ಛತಾ ಕಾರ್ಯವನ್ನು ನಿಲ್ಲಿಸುವಂತೆ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಪೌರ ಕಾರ್ಮಿಕರಿಗೆ ತಿಳಿಸಿದ್ದಾರೆ.

ಈ ಕುರಿತು ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನೇರ ಪಾವತಿ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ. ಪುರಸಭೆ, ನಗರಸಭೆ, ಮಹಾನಗರಪಾಲಿಕೆ, ಬಿಬಿಎಂಪಿ ಕೇಂದ್ರಗಳಲ್ಲಿ ಪೌರಕಾರ್ಮಿಕರೂ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳಿಂದ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಆಯ್ಕೆ

ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 18 ಸಾವಿರ ಪೌರ ಕಾರ್ಮಿಕರು ಅನಿರ್ಧಿಷ್ಠಾವಧಿ ಧರಣಿ ನಡೆಸಲಿದ್ದಾರೆ. ಆಯಾ ಜಿಲ್ಲಾ ಕೇಂದ್ರಗಳಲ್ಲೂ ಅನಿರ್ಧಿಷ್ಠಾವಧಿ ಮುಷ್ಕರ ಆರಂಭವಾಗಲಿದೆ. ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರವೇ ಹೊಣೆ ಎಂದು ನಾರಾಯಣ ಹೇಳಿದ್ದಾರೆ. ಇದನ್ನೂ ಓದಿ: ನಿತ್ಯ 12 ಗಂಟೆ ಕೆಲಸ, ವಾರದಲ್ಲಿ 3 ದಿನ ರಜೆ – ಜುಲೈ 1ರಿಂದ ಹೊಸ ಕಾರ್ಮಿಕ ಸಂಹಿತೆ?

ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ನಿರ್ಲಕ್ಷ್ಯ ವಹಿಸಿದೆ. ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ನೇರ ಪಾವತಿ ಪೌರ ಕಾರ್ಮಿಕರಿದ್ದಾರೆ. ಅವರಿಗೆ ಸರ್ಕಾರ ಸರ್ಕಾರ ತಿಂಗಳಿಗೆ ಕೇವಲ 14 ಸಾವಿರ ರೂಪಾಯಿ ವೇತನ ಮಾತ್ರ ನೀಡುತ್ತಿದೆ. ಪಿಎಫ್, ಇಎಸ್‌ಐ, ಗ್ರ್ಯಾಚುಯಿಟಿ ಯಾವುದೇ ಸೌಲಭ್ಯವಿಲ್ಲ. ಸಾಮಾಜಿಕ, ಆರ್ಥಿಕ ಭದ್ರತೆಯಿಲ್ಲದೇ ಪೌರ ಕಾರ್ಮಿಕರ ಬದುಕು ದುಸ್ತರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *