ಕರ್ತವ್ಯನಿರತ ಸಿವಿಲ್ ಡಿಫೆನ್ಸ್ ಅಧಿಕಾರಿ ಹೃದಯಾಘಾತದಿಂದ ನಿಧನ

By
1 Min Read

ಬೆಂಗಳೂರು: ಬೆಂಗಳೂರಿನ (Bengaluru) ಆಪ್ತರಕ್ಷಕನಂತೆ ಕಾರ್ಯ ನಿರ್ವಹಿಸುತ್ತಿದ್ದ ಸಿವಿಲ್ ಡಿಫೆನ್ಸ್ ವಿಭಾಗದ ಅಧಿಕಾರಿ (Civil Defence officer) ನಾಗೇಂದ್ರ ಅವರು ಬುಧವಾರ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಹಾನಿ, ಬಿಲ್ಡಿಂಗ್‍ಗಳ ಕುಸಿತ, ಅಪಘಾತಗಳು ಸಂಭವಿಸಿದಾಗ ಹಾಗೂ ಮೂಕ ಪ್ರಾಣಿಗಳಿಗೆ ತೊಂದರೆಯಾದಗೆಲೆಲ್ಲ ನಾಗೇಂದ್ರ ಅವರು ಸಹಾಯಕ್ಕೆ ನಿಲ್ಲುತ್ತಿದ್ದರು. ಜನರ ಸಂಕಷ್ಟವನ್ನು ಪರಿಹರಿಸಲು ಪ್ರಯತ್ನ ಪಡುತ್ತಿದ್ದರು. ಇದನ್ನೂ ಓದಿ: ಸಿಲಿಂಡರ್ ಸ್ಫೋಟದಲ್ಲಿ ಕಾರ್ಮಿಕನಿಗೆ ಗಾಯ – ಚಿಕಿತ್ಸೆ ಕೊಡಿಸದೆ ಅಮಾನವೀಯತೆ ತೋರಿದ ಮಾಲೀಕ

ನಾಗೇಂದ್ರ ಅವರು ಕಚೇರಿಯಲ್ಲಿ ಕೆಲಸ ಮಾಡುವ ವೇಳೆ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ – ಆಸ್ಪತ್ರೆಗೆ ದಾಖಲು

Share This Article