ಕಂಠ ಪೂರ್ತಿ ಕುಡಿದು `ನಮ್ಮ ಮೆಟ್ರೋ’ ನಿಲ್ದಾಣದಲ್ಲಿ ಗಲಾಟೆ – ಓರ್ವ ಪೊಲೀಸರ ವಶಕ್ಕೆ

Public TV
1 Min Read

ಬೆಂಗಳೂರು: ಕಂಠ ಪೂರ್ತಿ ಕುಡಿದು ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ (Namma Metro) ನಿಲ್ದಾಣದಲ್ಲಿ ಗಲಾಟೆ ಮಾಡಿದ ಓರ್ವ ವ್ಯಕ್ತಿಯನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.

ನಾಲ್ವರು ಭಾನುವಾರ ಕುಡಿದ ಅಮಲಿನಲ್ಲಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಭದ್ರತಾ ಅಧಿಕಾರಿಗಳು ಅವರನ್ನು ತಡೆದಿದ್ದಾರೆ. ಈ ವೇಳೆ ಸಿಬ್ಬಂದಿ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ.

ಮಹಿಳಾ ಸಿಬ್ಬಂದಿ ಹಾಗೂ ಟಿಕೆಟ್ ಆಪರೇಟರ್ ಜೊತೆ ಅಸಭ್ಯ ಪದ ಬಳಸಿ ನಿಂದಿಸಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿ ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಬಿಎಮ್‌ಆರ್‌ಸಿಎಲ್‌ (BMRCL) ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

Share This Article