ಮದುವೆ ವಿಚಾರಕ್ಕೆ ಪ್ರಭು ಚೌಹಾಣ್ ಸಂಬಂಧಿಕರು, ಭಾವಿ ಬೀಗರ ನಡುವೆ ಮಾರಾಮಾರಿ!

Public TV
1 Min Read

ಬೀದರ್: ಮದುವೆ ವಿಚಾರಕ್ಕೆ ಶಾಸಕ ಪ್ರಭು ಚೌಹಾಣ್ (Prabhu Chauhan) ಸಂಬಂಧಿಕರು ಹಾಗೂ ಭಾವಿ ಬೀಗರ ನಡುವೆ ಮಾರಾಮಾರಿ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೋಂತಿ ತಾಂಡದಲ್ಲಿ ಈ ಘಟನೆ ನಡೆದಿದೆ.

ಮಹಾರಾಷ್ಟ್ರದ (Maharashtra) ಉದ್ದಗೀರ್ ಯುವತಿಯೊಂದಿಗೆ ಪ್ರಭು ಚೌಹಾಣ್ ಮಗ ಪ್ರತೀಕ್ ಚೌಹಾಣ್‌ನೊಂದಿಗೆ ನಿಶ್ಚಿತಾರ್ಥವಾಗಿದೆ. ಈಗ ಮದುವೆ ಲೇಟಾದ ವಿಚಾರಕ್ಕೆ ಎರಡು ಕಡೆಯವರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಇದನ್ನೂ ಓದಿ: ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ – ಇಬ್ಬರು ಅರೆಸ್ಟ್‌

ಘಟನೆ ವಿಕೋಪಕ್ಕೆ ತಿರುಗಿ ಸಂಬಂಧಿಕರು ಹೊಡೆದಾಡಿಕೊಂಡಿದ್ದಾರೆ. ಎರಡು ಕಡೆಯವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅಷ್ಟರಲ್ಲಿ ಪರಿಸ್ಥಿತಿ ನಿಯಂತ್ರಣವಾಗಿದೆ. ಮಾರಾಮಾರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?

Share This Article