ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಮುರ್ಷಿದಾಬಾದ್‌ನಲ್ಲಿ ಮೊದಲ ಹಂತ ಚುನಾವಣೆ ವೇಳೆ ನಡೆದಿದ್ದ ಕಚ್ಚಾ ಬಾಂಬ್ ದಾಳಿ ಬಳಿಕ ಇದೀಗ ಟಿಎಂಸಿ-ಎಜೆಯುಪಿ ಕಾರ್ಯಕರ್ತರ ನಡುವಿನ ಘರ್ಷಣೆ ಉಲ್ಬಣಗೊಂಡಿದೆ.

ಮೊದಲ ಹಂತ ಚುನಾವಣೆ ವೇಳೆ ಮುರ್ಷಿದಾಬಾದ್‌ನಲ್ಲಿ (Murshidabad) ತೃಣಮೂಲ ಕಾಂಗ್ರೆಸ್ (TMC) ಮತ್ತು ಆಮ್ ಜನತಾ ಉನ್ನಯನ್ (AJUP) ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆಯಾಗಿದ್ದು, ಉಲ್ಬಣಗೊಂಡಿದೆ. ಘಟನೆಯ ನಂತರ ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ಆಗಮಿಸಿ, ಬೆಂಬಲಿಗರು ರಸ್ತೆಯಲ್ಲಿದ್ದ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಇದನ್ನೂ ಓದಿ: ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ


ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಜಿಲ್ಲಾ ಚುನಾವಣಾ ಅಧಿಕಾರಿ ಅವರಿಂದ ಚುನಾವಣಾ ಆಯೋಗ ವರದಿ ಕೇಳಿದೆ. ಅಗತ್ಯ ಕ್ರಮ ಕೈಗೊಳ್ಳಲು ಸಾಧ್ಯವಾಗುವಂತೆ ತನಿಖಾ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಬೇಕೆಂದು ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ಇನ್ನೂ ಇದಕ್ಕೂ ಮುನ್ನ ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಇದು ಸ್ಥಳೀಯರಲ್ಲಿ ಭೀತಿ ಹೆಚ್ಚಿಸಿದೆ. ಕಚ್ಚಾ ಬಾಂಬ್ ದಾಳಿಯ ಬಳಿಕ ಹಿಂಸಾಚಾರ ಪೀಡಿತವಾಗಿರುವ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: West Bengal elections 2026 | ಮತದಾನದ ಹೊತ್ತಲ್ಲೇ ಬಂಗಾಳದಲ್ಲಿ ಕಚ್ಚಾ ಬಾಂಬ್ ದಾಳಿ; ಹಲವರು ಗಂಭೀರ
ಮೊದಲ ಹಂತದ ಚುನಾವಣೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. ಉತ್ತರ ಬಂಗಾಳದ ಮುರ್ಷಿದಾಬಾದ್, ಜರ್ಗಾಮ, ಮೇದಿನಿಪುರ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್ ಮತ್ತು ಬಿರ್ಬುಮ್‌ನಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ.
ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಕ್ಷೇತ್ರಗಳಿದ್ದು, 1,478 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹೆಚ್ಚುವರಿ 4,660 ಸಹಾಯಕ ಮತಗಟ್ಟೆಗಳನ್ನ ಸ್ಥಾಪಿಸಲಾಗಿದೆ. ಒಟ್ಟು ಮತಗಟ್ಟೆಗಳ ಪೈಕಿ 8,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ರಾಜ್ಯದಾದ್ಯಂತ 780 ಕ್ಕೂ ಹೆಚ್ಚು ಕೇಂದ್ರ ಭದ್ರತಾ ಪಡೆಗಳ ಕಂಪನಿಗಳು ನಿಯೋಜನೆ ಮಾಡಿದೆ. ಮತದಾನಕ್ಕೂ ಮುನ್ನ ಈಗಾಗಲೇ 199 ಕ್ಕೂ ಹೆಚ್ಚು ಗೂಂಡಾಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: TamilNadu Elections 2026 | ಮತದಾನ ಜೋರು – ಹಕ್ಕು ಚಲಾಯಿಸಿದ ತಲೈವಾ, ದಳಪತಿ, ತ್ರಿಶಾ, ಕಮಲ್ ಹಾಸನ್

