ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಸಾವು

By
1 Min Read

ಬೆಂಗಳೂರು: ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿಯ ವಿದ್ಯಾರ್ಥಿನಿ (Student) ಸಾವನ್ನಪ್ಪಿರುವ ಘಟನೆ ನಗರದ ಬೆಳ್ಳಂದೂರಿನ (Bellandoor) ಕ್ಲಾಸಿಕ್ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.

ಜೆಸ್ಸಿಕಾ (15) ಸಾವನ್ನಪ್ಪಿದ ಬಾಲಕಿ. ಮಂಗಳವಾರ ಬೆಳಗ್ಗೆ 10:30ರ ವೇಳೆಗೆ ಘಟನೆ ನಡೆದಿದೆ. ಕಳೆದ 2 ವರ್ಷಗಳಿಂದ ಬಾಲಕಿ (Girl) ತನ್ನ ತಂದೆ ಹಾಗೂ ತಾಯಿಯೊಂದಿಗೆ ಕ್ಲಾಸಿಕ್ ಅಪಾರ್ಟ್ಮೆಂಟ್‌ನ 11ನೇ ಮಹಡಿಯಲ್ಲಿ ವಾಸವಿದ್ದಳು.

ಮೂಲತಃ ತಮಿಳುನಾಡಿನ ಕುಟುಂಬವಾಗಿದ್ದು, ತಂದೆ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ತಾಯಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಜೆಸ್ಸಿಕಾ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಳು. ಇದನ್ನೂ ಓದಿ: ಪಟಾಕಿ ಸಂಗ್ರಹ ಘಟಕಕ್ಕೆ ಬೆಂಕಿ – 1.5 ಕೋಟಿ ರೂ. ಮೌಲ್ಯದ ಪಟಾಕಿ ಭಸ್ಮ

ಜೆಸ್ಸಿಕಾ ಇತ್ತೀಚೆಗೆ ಶಾಲೆಗೂ ಸರಿಯಾಗಿ ಹೋಗುತ್ತಿರಲಿಲ್ಲ ಎಂಬುದು ತಿಳಿದುಬಂದಿದೆ. ಕಳೆದ 3 ತಿಂಗಳಲ್ಲಿ 6 ದಿನ ಮಾತ್ರವೇ ಜೆಸ್ಸಿಕಾ ಶಾಲೆಗೆ ಹೋಗಿದ್ದಳು. ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗುವುದಾಗಿ ಹೇಳಿ ಹೋಗಿದ್ದಳು. ನಂತರ  ಮನೆಗೆ ವಾಪಸ್ ಬಂದಿದ್ದಾಳೆ. ಬಳಿಕ ಟೀಚರ್ ತಾಯಿಗೆ ಕರೆ ಮಾಡಿ ಮಗಳು ಶಾಲೆಗೆ ಬಂದಿಲ್ಲ ಎಂದು ಹೇಳಿದ್ದಾರೆ. ನಂತರ ಪೋಷಕರು ಪರಿಶೀಲನೆ ಮಾಡಿದಾಗ ವಿಚಾರ ತಿಳಿದುಬಂದಿದೆ.

ಜೆಸ್ಸಿಕಾ ಕುಟುಂಬ ವಾಸವಿದ್ದ ಫ್ಲೋರ್‌ನ ಮೇಲಿನ ಫ್ಲೋರ್‌ಗೆ ತೆರಳಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ. ಮನೆಯಲ್ಲಿ, ಅಕ್ಕ-ಪಕ್ಕದಲ್ಲಿ ಯಾರೂ ಇಲ್ಲದ ಸಂದರ್ಭ 12ನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಪ್ರಾಥಮಿಕವಾಗಿ ಬಾಲಕಿ ಶಾಲೆಗೆ ಹೋಗಿ ಕ್ಲಾಸ್ ಅಟೆಂಡ್ ಮಾಡದೆ ವಾಪಸ್ ಬರುತ್ತಿದ್ದಳು ಎಂಬುದು ತಿಳಿದುಬಂದಿದೆ. ಆಕೆ ಮಾನಸಿಕವಾಗಿ ನೊಂದಿದ್ದಳು ಎನ್ನಲಾಗಿದೆ.

ಆತ್ಮಹತ್ಯೆಗೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಘಟನೆ ಬಗ್ಗೆ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಮಹಿಳಾ ಸೆಕ್ಯುರಿಟಿ ಗಾರ್ಡ್ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ – ಚಿಕಿತ್ಸೆ ಫಲಕಾರಿಯಾಗದೇ ಸಾವು

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್