ಮುಂಬೈ: ಮಹಾರಾಷ್ಟ್ರದ (Maharashtra) ಪಾಲ್ಘರ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ (School) 6ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು (Students) ತಡವಾಗಿ ಬಂದಿದ್ದಕ್ಕೆ 100 ಬಸ್ಕಿ ಹೊಡೆಸಿದ್ದು, ಆಕೆ ವಾರದ ನಂತರ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಸಾಯಿಯ ಸತಿವಲಿಯ ಶಾಲೆಯಲ್ಲಿ ನವೆಂಬರ್ 8 ರಂದು ಶಾಲೆಗೆ ತಡವಾಗಿ ಬಂದಿದ್ದಕ್ಕೆ ಬಾಲಕಿ ಮತ್ತು ಇತರ ನಾಲ್ವರು ವಿದ್ಯಾರ್ಥಿಗಳು ತಡವಾಗಿ ಬಂದಿದ್ದರು. ಅವರಿಗೆ ತಲಾ 100 ಬಸ್ಕಿ ಹೊಡೆಸಲಾಗಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಸದಸ್ಯರು ಆರೋಪಿಸಿದ್ದಾರೆ. ಅಮಾನವೀಯ ಶಿಕ್ಷೆಯಿಂದಾಗಿ ತನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಸಂತ್ರಸ್ತೆಯ ತಾಯಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಉಡುಪಿಯ ಪೆರ್ಡೂರಿನಲ್ಲಿ ಕಣ್ಮರೆಯಾಗಿದ್ದ ಬಾಲಕ ಶವವಾಗಿ ಪತ್ತೆ ಕೇಸ್ – ಸಾವಿನ ಬಗ್ಗೆ ಪೋಷಕರ ಸಂಶಯ
ಶಿಕ್ಷಕಿ ಶಾಲಾ ಬ್ಯಾಗ್‌ನ್ನು ಬೆನ್ನಿಗೆ ಕಟ್ಟಿ ಬಸ್ಕಿ ಹೊಡೆಯುವಂತೆ ಮಾಡುವಂತೆ ಒತ್ತಾಯಿಸಿದ್ದಾರೆ. ಶಿಕ್ಷೆ ವಿಧಿಸಿದ ಕೂಡಲೇ ತನ್ನ ಮಗಳು ತೀವ್ರ ಕುತ್ತಿಗೆ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದಳು. ಎದ್ದೇಳಲು ಸಾಧ್ಯವಾಗಲಿಲ್ಲ ಎಂದು ಬಾಲಕಿಯ ತಾಯಿ ತಿಳಿಸಿದ್ದಾರೆ.
ಬಾಲಕಿಗೆ ಮೊದಲೇ ಆರೋಗ್ಯ ಸಮಸ್ಯೆಗಳಿದ್ದವು. ಅದರ ನಡುವೆ ಆಕೆಗೆ ಶಿಕ್ಷೆ ವಿಧಿಸಲಾಗಿದೆ. ಇನ್ನೂ ಸಾವಿಗೆ ಕಾರಣವನ್ನು ನಿರ್ಧರಿಸಲು ತನಿಖೆ ನಡೆಯುತ್ತಿದೆ ಎಂದು ಬ್ಲಾಕ್ ಶಿಕ್ಷಣ ಅಧಿಕಾರಿ ಪಾಂಡುರಂಗ ಗಲಾಂ ತಿಳಿಸಿದ್ದಾರೆ. ಇಲ್ಲಿಯವರೆಗೆ ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಬಾಂಬ್ ಸ್ಫೋಟ ಕೇಸ್- ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಅರೆಸ್ಟ್
