ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ – ಕೇಂದ್ರ ಸಚಿವರೊಂದಿಗೆ ಚರ್ಚಿಸಿದ ಸುನಿಲ್ ಕುಮಾರ್

Public TV
1 Min Read

ನವದೆಹಲಿ: ಮೈಸೂರಿನಲ್ಲಿರುವ ಕೇಂದ್ರೀಯ ಭಾರತೀಯ ಭಾಷಾ ಸಂಸ್ಥಾನ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವ ಕುರಿತಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ದೆಹಲಿಯಲ್ಲಿ ಕೇಂದ್ರ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರನ್ನು ಸುನಿಲ್ ಕುಮಾರ್, ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ – 1 ಗಂಟೆಯಲ್ಲೇ ಪ್ರಶ್ನೆ ಪತ್ರಿಕೆ ವೈರಲ್

ಬಳಿಕ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸುನಿಲ್ ಕುಮಾರ್, ವಿಶೇಷವಾಗಿ ಮೈಸೂರಿನಲ್ಲಿರುವ ಕೇಂದ್ರೀಯ ಭಾರತೀಯ ಭಾಷಾ ಸಂಸ್ಥಾನ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವ ಬಗ್ಗೆ ಈ ಸಂದರ್ಭದಲ್ಲಿ ಪ್ರಸ್ತಾಪಿಸಲಾಯಿತು. ಸ್ವಾಯತ್ತತೆ ನೀಡಿದರೆ ಮಾತ್ರ ಅದು ರಚನಾತ್ಮಕ ಕಾರ್ಯಚಟುವಟಿಕೆ ಹಮ್ಮಿಕೊಳ್ಳಲು ಸಾಧ್ಯ ಎಂಬ ಸಂಗತಿಯನ್ನು ಕೇಂದ್ರ ಸಚಿವರಿಗೆ ಮನದಟ್ಟು ಮಾಡಿಕೊಡಲಾಯಿತು. ಕೇಂದ್ರ ಸಚಿವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸ್ವಾಯತ್ತತೆ ನೀಡುವ ಬಗ್ಗೆ ಸಂಬಂಧ ಪಟ್ಟವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಕನ್ನಡ ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರದ ಚಟುವಟಿಕೆಗಳಿಗೆ ಹೆಚ್ಚಿನ ಹಣಕಾಸು ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು. ಶಾಸ್ತ್ರೀಯ ಭಾಷೆಗೆ ಸಂಬಂಧಪಟ್ಟಹಾಗೆ ದೊಡ್ಡಮಟ್ಟದಲ್ಲಿ ಕಾರ್ಯಚಟುವಟಿಕೆಗಳನ್ನು ರೂಪಿಸಲು ಅಗತ್ಯ ಅನುದಾನವನ್ನು ಒದಗಿಸುವ ಕುರಿತು ಚರ್ಚಿಸಲಾಯಿತು. ಇದಕ್ಕೂ ಸಹ ಸ್ಪಂದಿಸಿದ ಕೇಂದ್ರ ಸಚಿವರು ಅನುದಾನ ಹೆಚ್ಚಳ ಮಾಡುವ ಬಗ್ಗೆ ಸಂಬಂಧಪಟ್ಟವರೊಂದಿಗೆ, ಚರ್ಚಿಸುವುದಾಗಿ ತಿಳಿಸಿದರು. ಬಹಳ ಮುಖ್ಯವಾಗಿ ಸ್ವತಃ ಧಮೇರ್ಂದ್ರ ಪ್ರಧಾನ್ ಶೀಘ್ರದಲ್ಲಿಯೇ ಮೈಸೂರಿನಲ್ಲಿರುವ ಕೇಂದ್ರೀಯ ಭಾರತೀಯ ಭಾಷಾ ಸಂಸ್ಥಾನ ಕೇಂದ್ರಕ್ಕೆ ಬೇಟಿ ನೀಡಿ ಅಲ್ಲಿನ ಚಟುವಟಿಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ ಎಂದು ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ: 22 ಐಪಿಎಸ್‌ ಅಧಿಕಾರಿಗಳು ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿದ್ದಾರೆ- ಎಂಎಚ್‌ಒ

Share This Article
Leave a Comment

Leave a Reply

Your email address will not be published. Required fields are marked *