ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ – ಬೆಳೆ ಹಾನಿ, ಅವಶೇಷಗಳಡಿ ಹೂತುಹೋದ ವಾಹನಗಳು

Public TV
1 Min Read

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಬಿಲಾಸ್ಪುರ (Bilaspur) ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನ ಜಾವ ಮೇಘಸ್ಫೋಟ (Cloudburst) ಸಂಭವಿಸಿದ ಪರಿಣಾಮ ಹಲವಾರು ವಾಹನಗಳು ಅವಶೇಷಗಳಡಿ ಹೂತುಹೋಗಿದ್ದು, ಅಪಾರ ಪ್ರಮಾಣದ ಬೆಳೆಹಾನಿಯುಂಟಾಗಿದೆ.

ನೈನಾ ದೇವಿ ವಿಧಾನಸಭಾ ಕ್ಷೇತ್ರದ ನಮ್ಹೋಲ್ ಪ್ರದೇಶದ ಗುತ್ರಹಾನ್ ಗ್ರಾಮದಲ್ಲಿ (Gutrahan Village) ಮೇಘಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ರಾಜಧಾನಿ ಶಿಮ್ಲಾದಲ್ಲಿ ದಟ್ಟ ಮಂಜು ಆವರಿಸಿದ್ದು, ಕಡಿಮೆ ಗೋಚರತೆಯ ಪರಿಣಾಮ ವಾಹನ ಸವಾರರು ಪರದಾಡಬೇಕಾಯಿತು. ಶನಿವಾರ ಮತ್ತು ಭಾನುವಾರ ರಾಜ್ಯದ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಟೀ ಚೆನ್ನಾಗಿಲ್ಲ ಎಂದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಪ್ಲಾಸ್ಕ್‌ನಿಂದ ಹಲ್ಲೆ

ಅಟ್ಟಾರಿ-ಲೇಹ್ ರಸ್ತೆ (NH-3), ಆಟ್-ಸೈಂಜ್ ರಸ್ತೆ (NH-305) ಮತ್ತು ಅಮೃತಸರ-ಭೋಟಾ ರಸ್ತೆ (NH-503A) ಸೇರಿದಂತೆ ಒಟ್ಟು 503 ರಸ್ತೆಗಳನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚಿನ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ರಾಜ್ಯದಲ್ಲಿ ಸುಮಾರು 953 ವಿದ್ಯುತ್ ಪರಿವರ್ತಕಗಳು ಮತ್ತು 336 ನೀರು ಸರಬರಾಜು ಯೋಜನೆಗಳು ಅಸ್ತವ್ಯಸ್ತಗೊಂಡಿವೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ) ತಿಳಿಸಿದೆ. ಇದನ್ನೂ ಓದಿ: ಉ.ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕುಸಿತ – ಗೇರುಸೊಪ್ಪ ವಿದ್ಯುತ್‌ ಉತ್ಪಾದನಾ ಘಟಕ ಬಳಿಯೇ ಕುಸಿದ ಧರೆ

ರಾಜ್ಯದಲ್ಲಿ ಜೂನ್ 20ರಿಂದ ಸೆಪ್ಟೆಂಬರ್ 12ರವರೆಗೆ ಒಟ್ಟು 386 ಜನರು ಸಾವನ್ನಪ್ಪಿದ್ದಾರೆ. 386 ಮಂದಿ ಪೈಕಿ 218 ಜನರು ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದರೆ, 168 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. ಹಠಾತ್ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ರಾಜ್ಯವು 4,465 ಕೋಟಿ ರೂ. ನಷ್ಟವನ್ನು ಅನುಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 12ರವರೆಗೆ ಸರಾಸರಿ 967.2 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ: ಸಾಲು ಸಾಲು ದುರಂತದ ಬೆನ್ನಲ್ಲೇ ಚಿಕ್ಕಬಳ್ಳಾಪುರ ಪೊಲೀಸರು ಅಲರ್ಟ್‌ – ಗಣೇಶ ವಿಸರ್ಜನೆಗೆ ಬಿಗಿ ಬಂದೋಬಸ್ತ್

Share This Article