ಜಮ್ಮು-ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ – ಹಠಾತ್ ಪ್ರವಾಹಕ್ಕೆ 10ಕ್ಕೂ ಹೆಚ್ಚು ಮನೆಗಳು ನಾಶ

Public TV
1 Min Read
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ (Cloudburst) 10ಕ್ಕೂ ಹೆಚ್ಚು ಮನೆಗಳಿಗೆ ನಾಶವಾಗಿವೆ.

ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು (IMD ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು. ಅದರ ಬೆನ್ನಲ್ಲೇ ಮೇಘಸ್ಫೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ 10ಕ್ಕೂ ಅಧಿಕ ಮನೆಗಳು ನಾಶವಾಗಿದ್ದು, ಈವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.ಇದನ್ನೂ ಓದಿ: ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್: ಜೆಡಿಎಸ್ ಲೇವಡಿ

ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ಪ್ರತಿಕೂಲ ಹವಾಮಾನದ ಹಿನ್ನೆಲೆ ಜಮ್ಮುವಿನಾದ್ಯಂತ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಜಮ್ಮುವಿನಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಜನರು ಭೂಕುಸಿತ ಪೀಡಿತ ಪ್ರದೇಶಗಳಿಂದ ದೂರವಿರಲು ಸೂಚಿಸಲಾಗಿದೆ. ತಾವಿ ನದಿ ಸೇರಿದಂತೆ ಅನೇಕ ನದಿಗಳು ಮತ್ತು ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ರಾತ್ರಿ ವೇಳೆ ನೀರಿನ ಪ್ರಮಾಣದಲ್ಲಿ ಗಮನಾರ್ಹ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಇನ್ನೂ ಕಾಶ್ಮೀರದ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಎತ್ತರದ ಪ್ರದೇಶಗಳಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಝೀಲಂ ನದಿಗೆ ಯಾವುದೇ ಪ್ರವಾಹ ಎಚ್ಚರಿಕೆ ನೀಡಲಾಗಿಲ್ಲವಾದರೂ, ನೀರಿನ ಮಟ್ಟ ಏರಿಕೆಯಾಗುವ ನಿರೀಕ್ಷೆಯಿದೆ. ಮಧ್ಯ ಕಾಶ್ಮೀರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಿದ್ದರೆ, ಉತ್ತರ ಕಾಶ್ಮೀರದಲ್ಲಿ ಹಗುರ ಮಳೆ ಅಥವಾ ಒಣ ಹವಾಮಾನ ಕಂಡುಬಂದಿದೆ.

ಆ.27ರವರೆಗೆ ಎತ್ತರದ ಪ್ರದೇಶಗಳಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ದುರ್ಬಲ ಪ್ರದೇಶಗಳಲ್ಲಿ ರಕ್ಷಣಾ ತಂಡಕ್ಕೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಹಬ್ಬಕ್ಕೆ ಬಟ್ಟೆ ಖರೀದಿಸುತ್ತಿದ್ದಾಗ ಕುಸಿದು ಬಿದ್ದು 17ರ ವಿದ್ಯಾರ್ಥಿ ಸಾವು

Share This Article