ಕನ್ನಡಿಗರ ತಂಟೆಗೆ ಬಂದ್ರೆ ಹುಷಾರ್! – MES ಪುಂಡರಿಗೆ ಸಿಎಂ ಎಚ್ಚರಿಕೆ

Public TV
1 Min Read

ಬೆಂಗಳೂರು: ಕನ್ನಡಿಗರ ತಂಟೆಗೆ ಬರದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರಿಗೆ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತಾಡಿದ ಸಿಎಂ ಬೊಮ್ಮಾಯಿ, ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟಿಕೆ ಮೆರೆದಿದೆ. ಇದನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಈಗಾಗಲೇ ಬೆಳಗಾವಿ ಮದುವೆಯಲ್ಲಿ ಪುಂಡಾಟ ತೋರಿದವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಆದರೆ ಎಂಇಎಸ್ ನಮ್ಮನೆಲದಲ್ಲಿ ಕಾನೂನನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಕೆ ಕೊಟ್ರು.

ಬೆಳಗಾವಿಯಲ್ಲಿ ನಡೆದ ಮದುವೆಯೊಂದರಲ್ಲಿ ಕನ್ನಡ ಗೀತೆಗಳ ಗಾಯನ ನಡೆಯಿತೆಂಬ ಕಾರಣಕ್ಕೆ ಎಂಇಎಸ್ ಕಾರ್ಯಕರ್ತರು ಮದುವೆಯಲ್ಲಿ ಭಾಗವಹಿಸಿದ್ದವರ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿದ್ರು. ಮದುವೆ ಆಗಲಿದ್ದ ವರನಿಗೂ ಹಲ್ಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸದ್ಯ 10 ಮಂದಿ ಎಂಇಎಸ್ ಆರೋಪಿಗಳ ಬಂಧನ ಆಗಿದೆ ಅಂತ ಹೇಳಿದರು. ಇದನ್ನೂ ಓದಿ: ಆಡಳಿತ ಮಂಡಳಿ ಎಚ್ಚರಿಕೆಗೆ ಡೋಂಟ್‍ಕೇರ್- ಹಿಜಬ್ ಧರಿಸಿ ಬಂದ 15 ವಿದ್ಯಾರ್ಥಿನಿಯರು!

ಮಂಗಳೂರಿನಲ್ಲಿ ಮತ್ತೆ ಕಾಣಿಸಿಕೊಂಡ ಹಿಜಬ್ ವಿವಾದದ ಬಗ್ಗೆಯೂ ಸಿಎಂ ಬೊಮ್ಮಾಯಿ ಮಾತಾಡಿದರು. ಹಿಜಬ್ ವಿವಾದವನ್ನು ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ಮೂಲಕ ಬಗೆಹರಿಸಲಾಗಿದೆ. ಈಗಾಗಲೇ ಹಿಜಬ್ ವಿವಾದಕ್ಕೆ ನ್ಯಾಯಾಲಯ ತನ್ನ ತೀರ್ಪನ್ನು ನೀಡಿದೆ. ಎಲ್ಲರೂ ನ್ಯಾಯಾಲಯದ ಆದೇಶವನ್ನು ಪರಿಪಾಲನೆ ಮಾಡಬೇಕು. ಪಿಯುಸಿಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಗಳು ಇಲ್ಲದಿರುವ ಕಡೆ ಕಾಲೇಜಿನ ಆಡಳಿತ ಮಂಡಳಿ ಅಥವಾ ಕಾಲೇಜಿನ ಪ್ರಾಂಶುಪಾಲರು ಆದೇಶದಂತೆ ನಡೆಯಬೇಕು ಎಂದರು.

ವಿಶ್ವವಿದ್ಯಾಲಯಗಳಲ್ಲಿ ಸಿಂಡಿಕೇಟ್ ನಿರ್ಣಯಗಳಂತೆ ನಡೆದುಕೊಳ್ಳಬೇಕು. ಸಿಂಡಿಕೇಟ್‍ನವರೂ ನ್ಯಾಯಾಲಯದ ಆದೇಶ ಪರಿಪಾಲನೆಗೆ ಒತ್ತು ನೀಡಬೇಕಾಗುತ್ತದೆ. ವಿದ್ಯಾರ್ಥಿಗಳು ಈ ವಿವಾದಲ್ಲಿ ಸಿಲುಕದೇ ವಿದ್ಯಾರ್ಜನೆಯ ಮೇಲೆ ಗಮನಹರಿಸಬೇಕು ಎಂದು ಇದೇ ವೇಳೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *